(ನ್ಯೂಸ್ ಕಡಬ) newskadaba.com ಸೆ. 01. ಜಿಲ್ಲೆಯಲ್ಲಿ ಒಟ್ಟು 16,46,387 ಮತದಾರರಿದ್ದು, ಇದರಲ್ಲ್ಲಿ 8,07,600 ಪುರುಷರು, 8,38,768 ಮಹಿಳೆಯರು ಮತ್ತು 19 ತೃತೀಯ ಲಿಂಗಿ ಮತದಾರರು ಸೇರಿದ್ದಾರೆ.
ನೋಟೀಸ್ ಗಳ ಸೃಜನೆ ಪ್ರಾರಂಭವಾಗಿದ್ದು, ಜಿಲ್ಲೆಯಲ್ಲಿ ಒಟ್ಟು 1,50,144 ನೋಟೀಸ್ ಗಳನ್ನು ಸೃಜಿಸಲಾಗುವುದು.
ನೋಟಿಸ್ ಹಂತದಲ್ಲಿ ಜಿಲ್ಲೆಯಲ್ಲಿ ಒಟ್ಟು 154 ಹೆಚ್ಚುವರಿ ಸಹಾಯಕ ಮತದಾರರ ನೋಂದಣಾಧಿಕಾರಿಗಳನ್ನು ನೇಮಕ ಮಾಡಲಾಗಿರುತ್ತದೆ. ಮತದಾರರ ನೋಂದಣಿಗಾಗಿ ವಿಶೇಷ ಅಭಿಯಾನವನ್ನು ಸೆಪ್ಟೆಂಬರ್ 9ರಿಂದ ಸೆಪ್ಟೆಂಬರ್ 20ರವರೆಗೆ ನಡೆಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆಪ್ಟೆಂಬರ್ 20ರ ವರೆಗೆ ಮತದಾರರ ನೋಂದಣಿ ವಿಶೇಷ ಅಭಿಯಾನ








