(ನ್ಯೂಸ್ ಕಡಬ) newskadaba.com ಸೆ. 02. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯಲು ಪ್ರೋತ್ಸಾಹಿಸುವ ಉದ್ದೇಶದಿಂದ ಮಂಡಳಿಯು “ಸಾಂದೀಪನಿ ಶಿಷ್ಯವೇತನ” ಯೋಜನೆಯನ್ನು ಜಾರಿಗೆ ತಂದಿರುತ್ತದೆ.
ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು ಹಾಗೂ ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದ ಚಾಲ್ತಿಯಲ್ಲಿರುವ ಹಿಂದುಳಿದ ಪ್ರಮಾಣಪತ್ರವನ್ನು (EWS ಪ್ರಮಾಣ ಪತ್ರ) ಹೊಂದಿರಬೇಕು. ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ಸಾಮಾನ್ಯ ಪದವಿ ಕೋರ್ಸ್ ಗಳನ್ನು ವ್ಯಾಸಂಗ ಮಾಡುತ್ತಿರುವ ಪ್ರತಿ ವಿದ್ಯಾರ್ಥಿಗೆ ವಾರ್ಷಿಕ ನಿರ್ವಹಣಾ ವೆಚ್ಚ ರೂ.15 ಸಾವಿರದಂತೆ ಶಿಷ್ಯವೇತನ ಪಾವತಿಸಲಾಗುತ್ತದೆ.
CET, NEET ಸೇರಿದಂತೆ ಸಾಮಾನ್ಯ ಪ್ರವೇಶ ಪರೀಕ್ಷೆಗಳ ಮೂಲಕ ಪದವಿ ಮತ್ತು ಸ್ನಾತಕೋತ್ತರ ಪದವಿಗಳಿಗೆ ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಶುಲ್ಕದ 2/3 ಭಾಗದ ಮೊತ್ತವನ್ನು ಮರುಪಾವತಿ ಮಾಡಲಾಗುತ್ತದೆ. ವೃತ್ತಿಪರ ಕೋರ್ಸ್ ಗಳಿಗೆ ಮ್ಯಾನೇಜ್ ಮೆಂಟ್ ಕೋಟಾ ಅಥವಾ ಕಾಮೆಡ್-ಕೆ ರಡಿ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳು ಶುಲ್ಕ ಮರುಪಾವತಿಗೆ ಅರ್ಹರಿರುವುದಿಲ್ಲ. ವಿದ್ಯಾರ್ಥಿಗಳ ಆಧಾರ್ ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು ಮತ್ತು ಬ್ಯಾಂಕ್ ಖಾತೆ ಎನ್.ಪಿ.ಸಿ.ಐ (NPCI) ರಡಿ ಸೀಡ್ ಆಗಿರಬೇಕು.
ಆಸಕ್ತ ಅರ್ಹ ವಿದ್ಯಾರ್ಥಿಗಳು www.ksbdb.Karnataka.gov.in ನಲ್ಲಿ ಡಿಸೆಂಬರ್ 31 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ದೂರವಾಣಿ ಸಂಖ್ಯೆ
8029605888, 8762249230 ಅಥವಾ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ (0824-2453222) ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








