(ನ್ಯೂಸ್ ಕಡಬ) newskadaba.com ಸೆ. 03. ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಎರಡು ರಬ್ಬರ್ ಸ್ಮೋಕ್ ಹೌಸ್ ಕಟ್ಟಡವು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಸುಮಾರು 5-6 ಲಕ್ಷ ರೂಪಾಯಿ ನಷ್ಟ ಉಂಟಾದ ಘಟನೆ ಧರ್ಮಸ್ಥಳ ಗ್ರಾಮದ ಪೊಸೊಳಿಕೆ ಎಂಬಲ್ಲಿ ಸಂಭವಿಸಿದೆ.
ಸ್ಥಳೀಯ ನಿವಾಸಿ ಪಿ.ಕೆ. ಜೋಬ್ ಅವರಿಗೆ ಸೇರಿದ ಈ ಎರಡು ಸ್ಮೋಕ್ ಹೌಸ್ ಗಳಲ್ಲಿ ಬುಧವಾರ ಮುಂಜಾನೆ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನ ನಡೆಸಿದರೂ, ಎರಡೂ ಕಟ್ಟಡಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ.
ಆಕಸ್ಮಿಕವಾಗಿ ಸಂಭವಿಸಿದ ಬೆಂಕಿಯಿಂದ ಎರಡೂ ಕಟ್ಟಡಗಳಿಗೆ ವ್ಯಾಪಕ ಹಾನಿಯಾಗಿದ್ದು, ಒಣಗಿಸಲು ಇರಿಸಲಾಗಿದ್ದ ರಬ್ಬರ್ ಶೀಟ್‌ಗಳು ಹಾಗೂ ಕಟ್ಟಡಗಳಲ್ಲಿ ಸಂಗ್ರಹಿಸಿಟ್ಟಿದ್ದ ಮರದ ದಿಮ್ಮಿಗಳು ಸಂಪೂರ್ಣ ಸುಟ್ಟುಹೋಗಿವೆ. ಘಟನೆಯಿಂದ ಸುಮಾರು 5-6 ಲಕ್ಷ ರೂಪಾಯಿವರೆಗೆ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ..








