ಮಂಗಳೂರು: ಅನಧಿಕೃತ ಬೀದಿ ವ್ಯಾಪಾರಿಗಳ ತೆರವುಗೊಳಿಸಲು ಪಾಲಿಕೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ



(ನ್ಯೂಸ್‌ ಕಡಬ) newskadaba.com  ಸೆ.03 .ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ಹಾಗೂ ಪಾದಚಾರಿಗಳ ಭದ್ರತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು, ಎಲ್ಲಾ ಅನಧಿಕೃತ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಲು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.







ಪಾದಚಾರಿ ಮಾರ್ಗ ಹಾಗೂ ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿ ವ್ಯಾಪಾರ ನಡೆಸುತ್ತಿರುವುದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ ಎಂದು ನಾಗರಿಕರು ಹಾಗೂ ವಿವಿಧ ಸಂಘಟನೆಗಳು ದೂರು ನೀಡಿದ್ದವು.






ಸೂಚನೆ ಹಾಗೂ ಎಚ್ಚರಿಕೆಗಳನ್ನು  ನೀಡಿದ್ದಾರೆ,MCC ಯಿಂದ ಅಧಿಕೃತ ಗುರುತಿನ ಚೀಟಿ ಮತ್ತು ವ್ಯಾಪಾರ ಪ್ರಮಾಣಪತ್ರ ಹೊಂದಿರುವ ವ್ಯಾಪಾರಿಗಳಿಗೆ ಮಾತ್ರ ಅವಕಾಶವಿರುತ್ತದೆ.ಉಳಿದ ಅನಧಿಕೃತ ವ್ಯಾಪಾರಿಗಳು ಸ್ವಯಂಪ್ರೇರಿತವಾಗಿ ಜಾಗ ಖಾಲಿ ಮಾಡಬೇಕು.ಹಾಗೂ ತಪ್ಪಿದಲ್ಲಿ, ಬೀದಿ ವ್ಯಾಪಾರಿಗಳ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಿ ತೆರವುಗೊಳಿಸಲಾಗುವುದು.

error: Content is protected !!
Scroll to Top