ಫಾತಿಮಾ ನಿಶಾನ ಕೊಲೆ ಪ್ರಕರಣ: ಅತ್ತೆ, ನಾದಿನಿಗೆ ಪುತ್ತೂರು ಸತ್ರ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಮಂಜೂರು



(ನ್ಯೂಸ್‌ ಕಡಬ) newskadaba.com  ಸೆ.03 . ಕಡೆಪಾಲ ಬಳಿ ನಿಗೂಢವಾಗಿ ಹತ್ಯೆಯಾಗಿದ್ದ ಫಾತಿಮಾ ನಿಶಾನ ಹತ್ಯೆ ಆರೋಪಿಗಳಿಗೆ ಪುತ್ತೂರು ಐದನೇ ಹೆಚ್ಚುವರಿ ಸತ್ರ ನ್ಯಾಯಾಲಯ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.







ಜು.18 ರಂದು ರಾತ್ರಿ ಮಾವ ಅಲವಿ, ಅತ್ತೆ ಆಯಿಷಾ ಹಾಗೂ ನಾದಿನಿ ಫಸೀಲಾ ಹಿಂಸೆ ನೀಡಿ ಕೊಂದಿರುವ ಆರೋಪದ ಹಿನ್ನೆಲೆಯಲ್ಲಿ ಸುಳ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಸುಳ್ಯ ಹಿರಿಯ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು.






ಆಯಿಷಾ ಮತ್ತು ಫಸೀಲಾ ಪರವಾಗಿ ಪುತ್ತೂರು ಐದನೇ ಹೆಚ್ಚುವರಿ ಸತ್ರ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದ್ದು, ಆರೋಪಿಗಳ ಪರವಾಗಿ ಸುಳ್ಯದ ಹಿರಿಯ ನ್ಯಾಯವಾದಿ ಎಂ.ವೆಂಕಪ್ಪ ಗೌಡ, ಚಂಪಾ ವಿ. ಗೌಡ, ರಾಜೇಶ್ ಬಿ.ಜಿ, ಶ್ಯಾಮ್ ಪ್ರಸಾದ್ ಎನ್. ಕೆ ಹಾಗೂ ವಿಮಲೇಶ್ ಆರ್. ಗೌಡ ವಾದಿಸಿದ್ದರು ಎಂದು ತಿಳಿದುಬಂದಿದೆ.

error: Content is protected !!
Scroll to Top