ಹೊಸಂಗಡಿಯಲ್ಲಿ ಕರ್ನಾಟಕ ಮೂಲದ ವ್ಯಕ್ತಿಯ ಅನುಮಾನಾಸ್ಪದ ಮೃತ್ಯು: ಕೊಲೆ ಶಂಕೆ



(ನ್ಯೂಸ್ಕಡಬ) newskadaba.com, ಸೆ.05. ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ಕರ್ನಾಟಕ ಮೂಲದ ವ್ಯಕ್ತಿಯೊಬ್ಬರ ಮೃತದೇಹ ಶುಕ್ರವಾರ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.ಮೃತರನ್ನು ರಮೇಶ್ (42) ಎಂದು ಗುರುತಿಸಲಾಗಿದ್ದು, ಅವರ ತಲೆಗೆ ಗಂಭೀರ ಗಾಯಗಳಾಗಿವೆ.







ಹೊಸಂಗಡಿಯ ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಹಳೆಯ ಮನೆಯೊಂದರಲ್ಲಿ (ಕ್ವಾರ್ಟರ್ಸ್) ಈ ಘಟನೆ ನಡೆದಿದೆ. ಕೆಲಸ ಮುಗಿಸಿ ಬಂದ ಇತರ ಕಾರ್ಮಿಕರು ರಕ್ತದ ಮಡುವಿನಲ್ಲಿ ಬಿದ್ದಿದ್ದ ಮೃತದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.






ಮದ್ಯಪಾನದ ವೇಳೆ ನಡೆದ ಗಲಾಟೆಯೇ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳದಿಂದ ಇಬ್ಬರು ಪರಾರಿಯಾಗುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದು, ಮಂಜೇಶ್ವರ ಪೊಲೀಸರು ಅವರಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

error: Content is protected !!
Scroll to Top