(ನ್ಯೂಸ್ ಕಡಬ) newskadaba.com, ಸೆ.05. ಪುತ್ತೂರು ತಾಲೂಕಿನ ಬೆಟ್ಟಂಪಾಡಿಯಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹೊರಭಾಗದಲ್ಲಿದ್ದ ಕಾಣಿಕೆ ಹುಂಡಿಯನ್ನು ಇತ್ತೀಚೆಗೆ ಕಳವು ಮಾಡಲಾಗಿತ್ತು.ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿರುವ ಪುತ್ತೂರು ಗ್ರಾಮಾಂತರ ಪೊಲೀಸರು, ಕೇರಳದ ಕಾಸರಗೋಡು ನಿವಾಸಿ ಹಾಗೂ ಅಂತಾರಾಜ್ಯ ಕಳ್ಳ ಸತೀಶ್ (31) ಎಂಬಾತನನ್ನು ಬಂಧಿಸಿದ್ದಾರೆ.
ಕಳುವಾಗಿದ್ದ ಕಾಣಿಕೆ ಹುಂಡಿ ಹಾಗೂ ಕೃತ್ಯ ಎಸಗಲು ಬಳಸಿದ್ದ ಸುಮಾರು ₹1 ಲಕ್ಷ ಮೌಲ್ಯದ ಬೈಕ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.ಆಗಸ್ಟ್ 24ರ ರಾತ್ರಿ ಹುಂಡಿ ಕಳವಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಬದಿಯಡ್ಕದಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈತನ ವಿರುದ್ಧ ಈಗಾಗಲೇ ಬದಿಯಡ್ಕ ಠಾಣೆಯಲ್ಲಿ ಅಡಿಕೆ ಕಳ್ಳತನ ಪ್ರಕರಣ ಕೂಡ ದಾಖಲಾಗಿದೆ.








