ತೋಕೂರು: ಭಜನೆ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಯುವಕ ಮೃತ್ಯು



(ನ್ಯೂಸ್‌ ಕಡಬ) newskadaba.com, ಸೆ.05. ಅಷ್ಟಮಿ ಆಚರಣೆಯ ಅಂಗವಾಗಿ ಶುಕ್ರವಾರ ತಡರಾತ್ರಿ ತೋಕೂರು ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ನಡೆದ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯುವಕನೋರ್ವ ಭಜನೆ ಮಾಡುತ್ತಿದ್ದಾಗಲೇ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದೆ.







ಮೃತರನ್ನು ತೋಕೂರು ನಿವಾಸಿ ಶ್ರೀನಾಥ್ ಶೆಟ್ಟಿಗಾರ್ (38) ಎಂದು ಗುರುತಿಸಲಾಗಿದೆ.






ಶ್ರೀನಾಥ್ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ಅಷ್ಟಮಿ ಆಚರಣೆಯ ಹಿನ್ನೆಲೆಯಲ್ಲಿ ತಮ್ಮ ಊರಿಗೆ ಮರಳಿದ್ದರು. ಸ್ಥಳೀಯ ಸಂಘ-ಸಂಸ್ಥೆಗಳ ಚಟುವಟಿಕೆಗಳಲ್ಲೂ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

error: Content is protected !!
Scroll to Top