ಮಲ್ಪೆ ಬಳಿಯ ಹೂಡೆಯಲ್ಲಿ ಎಸೆಯಲ್ಪಟ್ಟ ಸ್ಥಿತಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ!

(ನ್ಯೂಸ್‌ ಕಡಬ) newskadaba.com,  ಸೆ. 07.ಸೋಮವಾರ ಬೆಳಗ್ಗೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ  ನವಜಾತ ಹೆಣ್ಣು ಮಗುವೊಂದು ಎಸೆಯಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮಗುವನ್ನು ತಕ್ಷಣ ಗಮನಿಸಿದ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

ವೈದ್ಯರ ಪರೀಕ್ಷೆಯಲ್ಲಿ ಮಗುವಿಗೆ ಹೃದಯಬಡಿತ ಇರುವುದು ದೃಢಪಟ್ಟಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಆಸ್ಪತ್ರೆಗೆ ರವಾನಿಸಲಾಗಿದೆ.ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ

Scroll to Top