ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ ಸಿಹಿ ಸುದ್ದಿ

(ನ್ಯೂಸ್‌ ಕಡಬ) newskadaba.com,  ಸೆ. 08. ಕರ್ನಾಟಕ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ನೀಡಲಾಗುವ ಶೇ. 15ರಷ್ಟು ಗ್ರಾಮೀಣ ಕೋಟಾವನ್ನು ತಲಾ ಶೇ. 7.5 ರಂತೆ ಎರಡು ಭಾಗಗಳಾಗಿ ವಿಭಜಿಸಿ ಕರಡು ನಿಯಮ ಪ್ರಕಟಿಸಿದೆ.
ಕರ್ನಾಟಕದ ಗ್ರಾಮೀಣ ಭಾಗದ ಸರ್ಕಾರಿ ಶಾಲೆ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ 1 ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡಿದ ಅಭ್ಯರ್ಥಿಗಳಿಗೆ ಲಭ್ಯ.ಗ್ರಾಮೀಣ ಪ್ರದೇಶದ ಖಾಸಗಿ ಹಾಗೂ ಅನುದಾನಿತ ಸೇರಿದಂತೆ ಇತರ ಮಾನ್ಯತೆ ಪಡೆದ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯವರೆಗೆ ಓದಿದ ವಿದ್ಯಾರ್ಥಿಗಳಿಗೆ ಲಭ್ಯ.

ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ ನಿಯಮಗಳು, 2006ರ ನಿಯಮ 9ಕ್ಕೆ ಈ ಕರಡು ಅಧಿಸೂಚನೆ ತರಲಾಗಿದೆ.ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ಎಲ್ಲಾ ಪ್ರಮುಖ ವೃತ್ತಿಪರ ಉನ್ನತ ಶಿಕ್ಷಣ ಕೋರ್ಸ್‌ಗಳ ಸರ್ಕಾರಿ ಸೀಟುಗಳಿಗೆ ಇದು ಅನ್ವಯಿಸಲಿದೆ.ಸಾರ್ವಜನಿಕರು ಆಕ್ಷೇಪಣೆ ಹಾಗೂ ಸಲಹೆಗಳನ್ನು ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ. ಪರಿಶೀಲನೆಯ ನಂತರ ನಿಯಮಗಳು ಅಧಿಕೃತವಾಗಿ ರಾಜ್ಯ ಗೆಜೆಟ್‌ನಲ್ಲಿ ಪ್ರಕಟಗೊಳ್ಳಲಿವೆ.

Scroll to Top