ಸುಳ್ಯ: ರಬ್ಬರ್ ಮರ ಕತ್ತರಿಸುವಾಗ ಕುಸಿದುಬಿದ್ದು ಕಾರ್ಮಿಕ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ. 08. ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದ ಬಾಳೆಕಜೆ ನಿವಾಸಿ, ನುರಿತ ಮರ ಕಟಾವು ಕಾರ್ಮಿಕ ನಿರಂಜನಾಕ್ಷ (47) ಸೆಪ್ಟೆಂಬರ್ 7ರಂದು ರಬ್ಬರ್ ಮರ ಕತ್ತರಿಸುತ್ತಿದ್ದ ವೇಳೆ ಹೃದಯಘಾತದಿಂದ ಅಕಾಲಿಕ ಮರಣ ಹೊಂದಿದ್ದಾರೆ.

ಕಲ್ಲುಗುಂಡಿಯಲ್ಲಿ ಕೆಲಸ ಆರಂಭಿಸಿದ ಕೆಲವೇ ಹೊತ್ತಿನಲ್ಲಿ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಟೋರಿಕ್ಷಾ ಮೂಲಕ ಕಲ್ಲುಗುಂಡಿಯ ಕ್ಲಿನಿಕ್‌ಗೆ ಕರೆದೊಯ್ಯಲಾಯಿತಾದರೂ, ಹೆಚ್ಚಿನ ಚಿಕಿತ್ಸೆಗೆ ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದರು.

ಈ ಹಿನ್ನೆಲೆಯಲ್ಲಿ ಆಂಬುಲೆನ್ಸ್‌ನಲ್ಲಿ ಸುಳ್ಯಕ್ಕೆ ಕರೆದೊಯ್ಯುವ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಸ್ಥಳೀಯರು ಅವರಿಗೆ ಸಿಪಿಆರ್ ನೀಡಿ ಜೀವ ಉಳಿಸಲು ಪ್ರಯತ್ನಿಸಿದರೂ ಫಲಕಾರಿಯಾಗಲಿಲ್ಲ. ಮೃತರು ತಾಯಿ, ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ ಸಹೋದರ-ಸಹೋದರಿಯನ್ನು ಅಗಲಿದ್ದಾರೆ.

Scroll to Top