(ನ್ಯೂಸ್ ಕಡಬ) newskadaba.com, ಸೆ .08 . ಚಿಕ್ಕಬಳ್ಳಾಪುರ ತಾಲೂಕಿನ ಚೊಕ್ಕಹಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಇನಮಿಂಚೇನಹಳ್ಳಿಯ ನಿವಾಸಿ ಚೈತ್ರಾ. ಇವರು ಕಳೆದ 7-8 ವರ್ಷಗಳಿಂದ ಗಂಡನಿಂದ ದೂರವಾಗಿ, ತಮ್ಮ 10 ಮತ್ತು 12 ವರ್ಷದ ಇಬ್ಬರು ಮಕ್ಕಳೊಂದಿಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದರು.
ಕೋಲಾರ ಮೂಲದ ಪ್ರಿಯಕರ ಶಬ್ಬೀರ್ ಎಂಬಾತನ ಮೇಲೆ ಹಲ್ಲೆ ಹಾಗೂ ಕೊಲೆ ಮಾಡಿದ ಆರೋಪ ಕೇಳಿಬಂದಿದೆ.ಚೊಕ್ಕಹಳ್ಳಿಯ ಬಾಡಿಗೆ ಮನೆಯಲ್ಲಿ ಘಟನೆ ನಡೆದಿದ್ದು, ಚೈತ್ರಾ ಅವರನ್ನು ಪಕ್ಕದ ಮನೆಯವರ ಸಹಾಯದಿಂದ ಆಸ್ಪತ್ರೆಗೆ ಕಳುಹಿಸಿದ ಬಳಿಕ ಶಬ್ಬೀರ್ ಸ್ಥಳದಿಂದ ಪರಾರಿಯಾಗಿದ್ದಾನೆ.

ಶಬ್ಬೀರ್ ಮೃತ ಚೈತ್ರಾಳ ಮೊಬೈಲ್ ಫೋನ್ ತೆಗೆದುಕೊಂಡು ತಲೆಮರೆಸಿಕೊಂಡಿದ್ದಾನೆ.ನಂದಿಗಿರಿಧಾಮ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.





