ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ನಿವೃತ್ತ ಆಡಳಿತ ಸಿಬ್ಬಂದಿ ಫೆಲಿಕ್ಸ್ ಡಿ’ಸೋಜ ಇನ್ನಿಲ್ಲ

(ನ್ಯೂಸ್‌ ಕಡಬ) newskadaba.com,  ಸೆ.09. ಸಂತ ಫಿಲೋಮಿನಾ ಕಾಲೇಜಿನ ನಿವೃತ್ತ ಆಡಳಿತ ಸಿಬ್ಬಂದಿ ಫೆಲಿಕ್ಸ್ ಡಿ’ಸೋಜ (73) ಅವರು ಸೆಪ್ಟೆಂಬರ್ 8, 2026 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಫೆಲಿಕ್ಸ್ ಡಿ’ಸೋಜ ಅವರು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಸುದೀರ್ಘ ಕಾಲ ಆಡಳಿತ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸಿ, ನಿವೃತ್ತರಾಗಿದ್ದರು.

ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.ಅವರ ನಿಧನಕ್ಕೆ ಸಂತ ಫಿಲೋಮಿನಾ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಹಾಗೂ ಹಿರಿಯ ವಿದ್ಯಾರ್ಥಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Scroll to Top