ರಾಜ್ಯ ಸರ್ಕಾರದ ಮಹತ್ವದ ತೀರ್ಮಾನ: ಸೆಪ್ಟೆಂಬರ್ 21 ರಿಂದ 3 ದಿನಗಳ ವಿಶೇಷ ಅಧಿವೇಶನ ಆಹುತಿ

(ನ್ಯೂಸ್‌ ಕಡಬ) newskadaba.com,   ಸೆ .15. ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರಗಾಲ ಹಾಗೂ ಪಶ್ಚಿಮ ಘಟ್ಟಗಳ ಕಸ್ತೂರಿ ರಂಗನ್ ವರದಿ ಕುರಿತು ವಿಸ್ತೃತ ಚರ್ಚೆ ನಡೆಸಲು ರಾಜ್ಯ ಸರ್ಕಾರ ಸೆಪ್ಟೆಂಬರ್ 21 ರಿಂದ ಮೂರು ದಿನಗಳ ಕಾಲ ವಿಧಾನಮಂಡಲದ ವಿಶೇಷ ಅಧಿವೇಶನ ಕರೆದಿದೆ.

ಸೆಪ್ಟೆಂಬರ್ 21, 22 ಮತ್ತು 23 ರಂದು ವಿಶೇಷ ಅಧಿವೇಶನ ಕರೆಯಲು ಸರ್ಕಾರ ತೀರ್ಮಾನಿಸಿದೆ. ರಾಜ್ಯದಲ್ಲಿ ಎದುರಾಗಿರುವ ಭೀಕರ ಬರ ಪರಿಸ್ಥಿತಿ, ಜಾನುವಾರುಗಳ ಮೇವಿನ ಅಭಾವ ಹಾಗೂ ಪಶ್ಚಿಮ ಘಟ್ಟಗಳ ಕಸ್ತೂರಿ ರಂಗನ್ ವರದಿ ಜಾರಿ ಕುರಿತ ಚರ್ಚೆಗೆ ಈ ಅಧಿವೇಶನ ಮೀಸಲಿರಲಿದೆ.

ಕುಡಿಯುವ ನೀರು ಹಾಗೂ ಮೇವಿನ ಬಿಕ್ಕಟ್ಟು, ಪಶ್ಚಿಮ ಘಟ್ಟಗಳ ಕಸ್ತೂರಿ ರಂಗನ್ ವರದಿ, ಕೇಂದ್ರ ಸರ್ಕಾರ 7ನೇ ಬಾರಿಗೆ ಹೊರಡಿಸಿರುವ ಕರಡು ಅಧಿಸೂಚನೆ, ತೋಟಗಾರಿಕೆ ಫಾರ್ಮ್‌ಗಳ ಜಮೀನು ಪರಭಾರೆ ತಿದ್ದುಪಡಿ ವಿಧೇಯಕ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಮರುಪರಿಶೀಲನೆ ಹೀಗೆ ಹಲವು ವಿಚಾರಗಳ ಬಗ್ಗೆ ಈ ವಿಶೇಷ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದು.

Scroll to Top