
(ನ್ಯೂಸ್ ಕಡಬ) newskadaba.com, ಸೆ.16 . ಜುಲೈ 20ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ಸಂಭವಿಸಿದ ಹಿಂಸಾಚಾರ ಹಾಗೂ ಘಟನೆಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.ಜುಲೈ 20ರ ಪ್ರತಿಭಟನೆ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ತೀವ್ರ ಸಂಘರ್ಷ ನಡೆದಿತ್ತು.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಹಾಗೂ ವಿ. ಮೊಹನಾ ಅವರನ್ನೊಳಗೊಂಡ ತ್ರಿಪೀಠ ಈ ನಿರ್ದೇಶನ ನೀಡಿದೆ.ಮಾಜಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಆರ್. ಸುಭಾಷ್ ರೆಡ್ಡಿ ಅವರ ಅಧ್ಯಕ್ಷತೆಯ ಐವರು ಸದಸ್ಯರ ಉನ್ನತ ಮಟ್ಟದ ತನಿಖಾ ಸಮಿತಿಗೆ ಹೊಣೆ ನೀಡಲಾಗಿದೆ.
ತನಿಖೆಯ 4 ಪ್ರಮುಖ ಅಂಶಗಳು ಪ್ರತಿಭಟನಾಕಾರರ ವಿರುದ್ಧ ಪೆಲೆಟ್ ಗನ್ (ಬಳಸಲಾಗಿದೆಯೇ?ಮಹಿಳಾ ಪ್ರತಿಭಟನಾಕಾರರ ಮೇಲೆ ಹಿಂಸಾಚಾರ ಅಥವಾ ಕಿರುಕುಳ ನಡೆದಿದೆಯೇ?. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಗೆ ಉಂಟಾದ ಗಾಯಗಳ ವಾಸ್ತವ ಸ್ಥಿತಿ.ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಹಾಗೂ ಎರಡೂ ಕಡೆಯಿಂದ ಅತಿಯಾದ ಹಿಂಸಾಚಾರ ನಡೆದಿದೆಯೇ?..ಇದಕ್ಕೂ ಮುನ್ನ ಗಾಯಗೊಂಡ ಪ್ರತಿಭಟನಾಕಾರರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಸುಪ್ರೀಂ ಕೋರ್ಟ್ ದೆಹಲಿ ಸರ್ಕಾರಕ್ಕೆ ಸೂಚನೆ ನೀಡಿತ್ತು.




