ಕಟಪಾಡಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್ ಶಂಕೆ; ₹10-15 ಲಕ್ಷ ನಷ್ಟ

(ನ್ಯೂಸ್‌ ಕಡಬ) newskadaba.com, ಸೆ. 19 . ಕಾಪು ತಾಲೂಕಿನ ಕಟಪಾಡಿ ಸಮೀಪದ ಸುಭಾಷ್ ನಗರದಲ್ಲಿರುವ ತೆಂಗಿನಕಾಯಿ ಸಂಸ್ಕರಣಾ ಹಾಗೂ ಸಂಗ್ರಹ ಘಟಕದಲ್ಲಿ ಶನಿವಾರ ಮುಂಜಾನೆ ಅಗ್ನಿ ಅವಘಡ ಸಂಭವಿಸಿದ್ದು, ಅಂದಾಜು 10-15 ಲಕ್ಷ ರೂ. ನಷ್ಟ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಘಟಕದಲ್ಲಿದ್ದ ಅಪಾರ ಪ್ರಮಾಣದ ತೆಂಗಿನಕಾಯಿಗಳು ಬೆಂಕಿಗಾಹುತಿಯಾಗಿದ್ದು, ಪ್ರಾಥಮಿಕ ಅಂದಾಜಿನ ಪ್ರಕಾರ ₹10 ರಿಂದ 15 ಲಕ್ಷ ನಷ್ಟ ಸಂಭವಿಸಿದೆ.ಉಡುಪಿಯ ಎರಡು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತಂದಿವೆ. ಹೆಚ್ಚಿನ ತನಿಖೆ ಮುಂದುವರಿದಿದೆ.

Scroll to Top