ರಸ್ತೆ ಬದಿಯ ದಟ್ಟ ಪೊದೆಯಲ್ಲಿ ಅಡಗಿದ್ದ ಆನೆ ದಾಳಿ; ಸಾರ್ವಜನಿಕರ ತೀವ್ರ ಆಕ್ರೋಶ

(ನ್ಯೂಸ್‌ ಕಡಬ) newskadaba.com, ಸೆ. 19 .  ಕೊಡಗಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಕಾಡಾನೆ ದಾಳಿಗೆ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.ಕೂಲಿ ಕೆಲಸಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಕಾರ್ಮಿಕರ ಮೇಲೆ ಏಕಾಏಕಿ ರಸ್ತೆಗೆ ನುಗ್ಗಿ ದಾಳಿ ನಡೆಸಿದ ಒಂಟಿ ಸಲಗ.ಗಾಯಾಳುಗಳು  ಸುಬ್ರಹ್ಮಣಿ (60) ಹಾಗೂ ಉಮೇಶ್ (53).

ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನೆ.ರಸ್ತೆ ಬದಿಯ ಪೊದೆಗಳು ದಟ್ಟವಾಗಿ ಬೆಳೆದಿದ್ದರಿಂದ ಆನೆ ಅಡಗಿರುವುದು ಸವಾರರಿಗೆ ಕಾಣಿಸಿರಲಿಲ್ಲ.

ರಸ್ತೆ ಬದಿಯ ಗಿಡಗಂಟಿಗಳನ್ನು ತೆರವುಗೊಳಿಸದೆ ನಿರ್ಲಕ್ಷ್ಯ ವಹಿಸಿರುವುದಕ್ಕೆ ಸಾರ್ವಜನಿಕರ ತೀವ್ರ ಅಸಮಾಧಾನ.

Scroll to Top