ನೆಲ್ಯಾಡಿ ಬಳಿ ಸರಣಿ ಅಪಘಾತ: ಗ್ಯಾಸ್ ಟ್ಯಾಂಕರ್‌ಗೆ ಡಿಕ್ಕಿಯಾಗಿ ಮದ್ಯದ ಲಾರಿ ಪಲ್ಟಿ!

(ನ್ಯೂಸ್‌ ಕಡಬ) newskadaba.com,  ಸೆ.21 . ಕಡಬ ತಾಲೂಕಿನ ನೆಲ್ಯಾಡಿ ಬಳಿ ಸೆಪ್ಟೆಂಬರ್ 20ರಂದು ಚಾಲಕನ ನಿರ್ಲಕ್ಷ್ಯದಿಂದಾಗಿ 3 ವಾಹನಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ.

ಸಕಲೇಶಪುರದಿಂದ ಮಂಗಳೂರಿನತ್ತ ತೆರಳುತ್ತಿದ್ದ ಲಾರಿಯೊಂದು ಮುಂದೆ ಸಾಗುತ್ತಿದ್ದ ಮದ್ಯದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮದ್ಯದ ಲಾರಿ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಗ್ಯಾಸ್ ಟ್ಯಾಂಕರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ.

ಅಪಘಾತದಲ್ಲಿ ಮೂರೂ ವಾಹನಗಳು ಹಾಗೂ ಲಾರಿಯಲ್ಲಿದ್ದ ಮದ್ಯದ ಸರಕು ಹಾನಿಗೊಳಗಾಗಿದ್ದು, ಚಾಲಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ನೆಲ್ಯಾಡಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಲಾರಿ ಮಾಲೀಕ ರಾಜಾ ನೀಡಿದ ದೂರಿನನ್ವಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top