
(ನ್ಯೂಸ್ ಕಡಬ) newskadaba.com, ಸೆ.22 .ಗುಜರಾತ್ನ ಹಿಮ್ಮತ್ನಗರದಲ್ಲಿ ವೇಗವಾಗಿ ಬಂದ ಕಾರೊಂದು ಪಾದಯಾತ್ರೆ ಕೈಗೊಂಡಿದ್ದ ಭಕ್ತರ ಗುಂಪಿಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ.ಅಪಘಾತದಿಂದ ರೊಚ್ಚಿಗೆದ್ದ ಸಾರ್ವಜನಿಕರು ಸ್ಥಳದಲ್ಲೇ ಕಾರಿಗೆ ಬೆಂಕಿ ಹಚ್ಚಿದ್ದು, ವಾಹನ ಸಂಪೂರ್ಣವಾಗಿ ಭಸ್ಮವಾಗಿದೆ.
ಘಟನೆಯಿಂದಾಗಿ ಸ್ಥಳದಲ್ಲಿ ದಟ್ಟವಾದ ಹೊಗೆ ಆವರಿಸಿದ್ದು, ಕೆಲಕಾಲ ತೀವ್ರ ಆತಂಕ ಹಾಗೂ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದು, ಗಾಯಗೊಂಡವರ ವಿವರ ಹಾಗೂ ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.




