
(ನ್ಯೂಸ್ ಕಡಬ) newskadaba.com, ಸೆ. 24 . ವಿಮಾ ಕಂಪನಿಗಳಿಗೆ ಸಲ್ಲಿಕೆಯಾಗುವ ವಂಚನೆಪೂರಿತ ಕ್ಲೇಮ್‌ಗಳ ಕುರಿತು ದೂರುಗಳನ್ನು ದಾಖಲಿಸಿಕೊಂಡು ತ್ವರಿತ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಿ ಗೃಹ ಇಲಾಖೆ ಆದೇಶ ಹೊರಡಿಸಿದೆ.ದೇಶಾದ್ಯಂತ ರಾಜ್ಯ ಮಟ್ಟದಲ್ಲಿ ವಿಶೇಷ ತನಿಖಾ ತಂಡಗಳನ್ನು ರಚಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಈ ಎಸ್‌ಐಟಿ ರಚಿಸಲಾಗಿದೆ.
ಈ ಎಸ್‌ಐಟಿಗೆ ಐಜಿಪಿ ಹಂತದ ಅಧಿಕಾರಿಯನ್ನು ಅಧ್ಯಕ್ಷರನ್ನಾಗಿ ಹಾಗೂ ಸಿಐಡಿಯಿಂದ ನಾಮನಿರ್ದೇಶನಗೊಳ್ಳುವ ಎಸ್‌ಪಿ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.
ಈ ತಂಡದಲ್ಲಿ ಓರ್ವ ಡಿವೈಎಸ್‌ಪಿ ಹಾಗೂ ಮೂವರು ಇನ್ಸ್‌ಪೆಕ್ಟರ್‌ಗಳು ಸದಸ್ಯರಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.ವಿಮಾ ಕಂಪನಿಗಳಿಂದ ಸ್ವೀಕರಿಸಲ್ಪಡುವ ಎಲ್ಲಾ ರೀತಿಯ ವಂಚನೆ ದೂರುಗಳನ್ನು ಈ ಎಸ್‌ಐಟಿ ಸಮಗ್ರವಾಗಿ ತನಿಖೆಗೊಳಪಡಿಸಲಿದೆ.




