
(ನ್ಯೂಸ್ ಕಡಬ) newskadaba.com, ಸೆ. 24 . ಕುಂದಾಪುರ ಸಮೀಪದ ಕೋಟೇಶ್ವರದ ಕೋಟಿ ತೀರ್ಥ ಪುಷ್ಕರಣಿಗೆ ಹಾರಿ 37 ವರ್ಷದ ಪದ್ಮನಾಭ ಆಚಾರ್ಯ ಎಂಬುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರನ್ನು ಹೊದ್ರಾಳಿ ಕೊಳನಕಟ್ಟೆ ನಿವಾಸಿ ಮಹಾಬಲ ಆಚಾರ್ಯ ಅವರ ಪುತ್ರ ಪದ್ಮನಾಭ ಆಚಾರ್ಯ (37) ಎಂದು ಗುರುತಿಸಲಾಗಿದೆ. ಇವರು ಕಳೆದ 4 ತಿಂಗಳಿಂದ ಕೆಲಸಕ್ಕೆ ಹೋಗುತ್ತಿರಲಿಲ್ಲ ಎನ್ನಲಾಗಿದೆ.ಮಂಗಳವಾರ ಮನೆಯಿಂದ ಹೊರಟಿದ್ದ ಪದ್ಮನಾಭ ಅವರ ದ್ವಿಚಕ್ರ ವಾಹನ, ಚಪ್ಪಲಿ ಹಾಗೂ ಟೋಪಿ ದೇವಸ್ಥಾನದ ಕೊಳದ ಮೆಟ್ಟಿಲುಗಳ ಬಳಿ ಪತ್ತೆಯಾಗಿತ್ತು.
ಸ್ಥಳೀಯರಾದ ಸುಧೀರ್ ಕುಮಾರ್ ಶೆಟ್ಟಿ, ಪ್ರಭಾಕರ ಶೆಟ್ಟಿ ಹಾಗೂ ಸತ್ಯನಾರಾಯಣ ಮಂಜ ಬೋಟ್ ಮೂಲಕ ಶೋಧ ನಡೆಸಿ ಮೃತದೇಹ ಪತ್ತೆಹಚ್ಚಿದ್ದು, ಬಳಿಕ ಮುಳುಗುತಜ್ಞ ಈಶ್ವರ್ ಮಲ್ಪೆ ತಂಡ ಕೊಳದಿಂದ ಹೊರತೆಗೆದಿದೆ.ಮೃತದೇಹವನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




