
(ನ್ಯೂಸ್ ಕಡಬ) newskadaba.com, ಸೆ. 19 . ಮಂಗಳೂರು: ನಗರ ಅಪರಾಧ ವಿಭಾಗದ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಾದಕ ದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ 36 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಿ, ₹1.15 ಲಕ್ಷ ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸೆಪ್ಟೆಂಬರ್ 23ರಂದು ಸಂಜೆ ಮಂಗಳೂರು ತಾಲೂಕಿನ ಅರ್ಕುಳ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 73ರ ಪಕ್ಕದಲ್ಲಿ ಪೊಲೀಸರು ಈ ದಾಳಿ ನಡೆಸಿದ್ದಾರೆ.23.20 ಗ್ರಾಂ MDMA (ಮೌಲ್ಯ ₹1,15,000), 2 ಮೊಬೈಲ್ ಫೋನ್‌ಗಳು ಮತ್ತು 1 ಡಿಜಿಟಲ್ ತೂಕದ ಮಾಪಕ.
ಆರೋಪಿ ಹಾಗೂ ವಶಪಡಿಸಿಕೊಂಡ ವಸ್ತುಗಳನ್ನು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದ್ದು, NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿ ಸುಭಾಷ್ ವಿರುದ್ಧ ಈ ಹಿಂದೆ ಮಂಗಳೂರು ಪೂರ್ವ ಠಾಣೆಯಲ್ಲೂ ಮಾದಕ ದ್ರವ್ಯ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಮುಂದುವರಿದಿದ್ದು, ಮಾದಕ ದ್ರವ್ಯ ಜಾಲದ ಕುರಿತು ಯಾವುದೇ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ತಕ್ಷಣ ಪೊಲೀಸರಿಗೆ ತಿಳಿಸಲು ಕೋರಲಾಗಿದೆ.




