
(ನ್ಯೂಸ್ ಕಡಬ) newskadaba.com, ಸೆ.26 . ಆಲಂಕಾರಿನಲ್ಲಿ ಭೀಕರ ರಸ್ತೆ ಅಪಘಾತ – ಮಹೀಂದ್ರಾ ಥಾರ್ ಡಿಕ್ಕಿಯಾಗಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟಿದ್ದಾರೆ!

ಮೃತರನ್ನು ಆಲಂಕಾರು ನಾಡ್ತಿಲ ನಿವಾಸಿ ಲೋಕೇಶ್ ನಾಡ್ತಿಲ (42) ಎಂದು ಗುರುತಿಸಲಾಗಿದೆ. ರಾತ್ರಿ ಸುಮಾರು 9.45ರ ವೇಳೆಗೆ ಲೋಕೇಶ್ ಅವರು ತಮ್ಮ ಬೈಕ್‌ನಲ್ಲಿ ಪೇಟೆಯಿಂದ ಆಚಾರಿಕೊಟ್ಟ ಕಡೆಗೆ ತೆರಳುತ್ತಿದ್ದರು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಮಹೀಂದ್ರಾ ಥಾರ್ (KA-21-MB-0233) ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದಿಂದ ಗಂಭೀರವಾಗಿ ಗಾಯಗೊಂಡ ಲೋಕೇಶ್ ಅವರನ್ನು ತಕ್ಷಣವೇ ಉಪ್ಪಿನಂಗಡಿ ಹಾಗೂ ಬಳಿಕ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 11 ಗಂಟೆ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರ ಅಪಘಾತ ಎಸಗಿದ ಬಳಿಕ ವಾಹನ ನಿಲ್ಲಿಸದೆ ಥಾರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ರಂಜಿತ್ ಬಿ. ನೀಡಿದ ದೂರಿನನ್ವಯ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.




