ಪಾಂಡೇಶ್ವರದಲ್ಲಿ ಕರುಣಾಜನಕ ಘಟನೆ: ತಡೆಗೋಡೆ ಬಿದ್ದು ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ನಿಧನ

(ನ್ಯೂಸ್‌ ಕಡಬ) newskadaba.com, ಸೆ.28  . ಪಾಂಡೇಶ್ವರದ ಎಮ್ಮೆಕೆರೆಯ ರಾಮ ಲಕ್ಷ್ಮಿ ನಾರಾಯಣ್ ಸಮಾವೇಶ ಸಭಾಂಗಣದಲ್ಲಿ ಶನಿವಾರ ನಡೆದ ಆಲ್ ಕಾಲೇಜು ವಿದ್ಯಾರ್ಥಿ ಸಂಘದ ಕಾರ್ಯಕ್ರಮದ ವೇಳೆ ಮೊದಲ ಮಹಡಿಯ ಬಾಲ್ಕನಿ ತಡೆಗೋಡೆ ಏಕಾಏಕಿ ಕುಸಿದು ಬಿದ್ದಿದೆ..

ಸಂತ ಅಲೋಶಿಯಸ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ, ಹಳೆಯಂಗಡಿ ನಿವಾಸಿ .ಮೆರವಣಿಗೆ ವೀಕ್ಷಿಸುತ್ತಿದ್ದ ಶಮಾಜ್ ಅವರ ಮೇಲೆ ತಡೆಗೋಡೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ಅವರನ್ನು ಉಡುಪಿಯ ಹೈಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಶನಿವಾರ ರಾತ್ರಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇತರ ಮೂವರು ವಿದ್ಯಾರ್ಥಿಗಳಿಗೂ ಗಾಯಗಳಾಗಿವೆ.

ಕಟ್ಟಡದ ಶಿಥಿಲಾವಸ್ಥೆಯ ಹೊರತಾಗಿಯೂ ಯಾವುದೇ ಸುರಕ್ಷತಾ ಮುನ್ನೆಚ್ಚರಿಕೆ ವಹಿಸದೇ ಕಾರ್ಯಕ್ರಮ ಆಯೋಜಿಸಿದ ಹಿನ್ನೆಲೆಯಲ್ಲಿ, ಮೃತನ ತಂದೆ ನೀಡಿದ ದೂರಿನಂತೆ ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಕಟ್ಟಡ ಮಾಲೀಕ ಪರೀಕ್ಷಿತ್ ರೈ ಹಾಗೂ ಆಯೋಜಕ ವಕೀಲ ದಿನಕರ್ ಶೆಟ್ಟಿ ವಿರುದ್ಧ ಬಿಎನ್‌ಎಸ್  ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ..

Scroll to Top