ಗಾಂಧಿ, ಶಾಸ್ತ್ರೀಜಿಗೆ ಪ್ರಧಾನಿ ಮೋದಿ ಭಾವಪೂರ್ಣ ನಮನ: ರಾಜ್‌ಘಾಟ್, ವಿಜಯ್ ಘಟ್‌ನಲ್ಲಿ ಪ್ರಾರ್ಥನೆ

(ನ್ಯೂಸ್‌ ಕಡಬ) newskadaba.com, ಅ.02 . ಗಾಂಧಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಬ್ಬರೂ ಮಹಾನ್ ನಾಯಕರಿಗೆ ಭಾವಪೂರ್ಣ ಗೌರವ ನಮನ ಸಲ್ಲಿಸಿದರು.

ರಾಜ್‌ಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧೀಜಿಯವರ ಸಮಾಧಿ ಬಳಿ ನಡೆದ ಸರ್ವಧರ್ಮ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಪ್ರಧಾನಿ, ಬಳಿಕ ವಿಜಯ್ ಘಟ್‌ಗೆ ತೆರಳಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು.ಬಾಪು ಅವರ ಸರಳತೆ ಹಾಗೂ ಸೇವಾ ಮನೋಭಾವ ‘ವಿಕಸಿತ ಭಾರತ’ ನಿರ್ಮಾಣಕ್ಕೆ ಸ್ಪೂರ್ತಿ ಎಂದ ಮೋದಿ, ಶಾಸ್ತ್ರೀಜಿಯವರ ‘ಜೈ ಜವಾನ್, ಜೈ ಕಿಸಾನ್’ ಘೋಷಣೆಯು ಸೈನಿಕರು ಹಾಗೂ ರೈತರ ಮಹತ್ವವನ್ನು ಎತ್ತಿಹಿಡಿಯುತ್ತದೆ ಎಂದು ಸ್ಮರಿಸಿದರು.

ದೆಹಲಿ ಸಿಎಂ ರೇಖಾ ಗುಪ್ತಾ, ಲೆಫ್ಟಿನೆಂಟ್ ಗವರ್ನರ್ ತರಂಜಿತ್ ಸಿಂಗ್ ಸಂಧು, ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತು ಉಪಾಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ರಾಜ್‌ಘಾಟ್‌ನಲ್ಲಿ ಪುಷ್ಪನಮನ ಸಲ್ಲಿಸಿದರು.

Scroll to Top