
(ನ್ಯೂಸ್ ಕಡಬ) newskadaba.com, ಅ.02 . ಈ ಹಿಂದೆ ಪಾಲಕ್ಕಾಡ್ ವಿಭಾಗದಲ್ಲಿದ್ದ ಮಂಗಳೂರು ರೈಲ್ವೆ ಪ್ರದೇಶವನ್ನು ಮೈಸೂರು ವಿಭಾಗದ ಆಡಳಿತಾತ್ಮಕ ವ್ಯಾಪ್ತಿಗೆ ಅಧಿಕೃತವಾಗಿ ಸೇರ್ಪಡೆಗೊಳಿಸಿ ಕಾರ್ಯಾಚರಣೆ ಆರಂಭಿಸಲಾಗಿದೆ.
ಸುಗಮ ಅಧಿಕಾರ ಹಸ್ತಾಂತರ ಮತ್ತು ರೈಲು ಸಂಚಾರಕ್ಕೆ ಅಡಚಣೆಯಾಗದಂತೆ ಮೈಸೂರು ವಿಭಾಗದ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶಮ್ಮಾಸ್ ಹಮೀದ್ ಅವರು ಸ್ಥಳೀಯ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.ಮಂಗಳೂರು ಸೆಂಟ್ರಲ್, ಮಂಗಳೂರು ಜಂಕ್ಷನ್, ಪಣಂಬೂರು ಹಾಗೂ ಜೋಕಟ್ಟೆ ರೈಲ್ವೆ ಕೇಂದ್ರಗಳಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ, ಮೂಲಸೌಕರ್ಯ ಹಾಗೂ ಸಿದ್ಧತೆಗಳನ್ನು ಪರಿಶೀಲಿಸಿತು.

ರೈಲು ಕಾರ್ಯಾಚರಣೆ, ಸಿಬ್ಬಂದಿ ಸಿದ್ಧತೆ, ಪ್ರಯಾಣಿಕರ ಸೇವೆ ಹಾಗೂ ಸುರಕ್ಷತಾ ವ್ಯವಸ್ಥೆಗಳಿಗೆ ಆದ್ಯತೆ ನೀಡಿ, ವಿಭಾಗೀಯ ಕಚೇರಿ ಮತ್ತು ಕ್ಷೇತ್ರ ಮಟ್ಟದ ಘಟಕಗಳ ನಡುವೆ ನಿರಂತರ ಸಮನ್ವಯ ಕಾಯ್ದುಕೊಳ್ಳಲು ಸೂಚಿಸಲಾಯಿತು.




