ಕರಾವಳಿಗರಿಗೆ ಸಿಹಿ ಸುದ್ದಿ: ಬೆಂಗಳೂರು-ಮಂಗಳೂರು ವಂದೇ ಭಾರತ್‌ ರೈಲು ಗೋವಾದ ಮಡಗಾಂವ್‌ವರೆಗೆ ವಿಸ್ತರಣೆ

(ನ್ಯೂಸ್‌ ಕಡಬ) newskadaba.com, ಅ.02 .ಕರಾವಳಿ ಭಾಗದ ಪ್ರಯಾಣಿಕರಿಗೆ ಕೇಂದ್ರ ರೈಲ್ವೆ ಸಚಿವಾಲಯದ ಕಡೆಯಿಂದ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಪ್ರಸ್ತುತ ಸಂಚರಿಸುತ್ತಿರುವ ಮಡಗಾಂವ್‌-ಮಂಗಳೂರು ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲನ್ನು ಇದೀಗ ರಾಜಧಾನಿ ಬೆಂಗಳೂರಿನವರೆಗೆ (ಯಶವಂತಪುರ) ವಿಸ್ತರಿಸಲಾಗಿದೆ.

ಈ ರೈಲು ಹಾಸನ, ಮಂಗಳೂರು ಜಂಕ್ಷನ್‌, ಉಡುಪಿ ಹಾಗೂ ಕಾರವಾರ ಮಾರ್ಗವಾಗಿ ಬೆಂಗಳೂರು ಮತ್ತು ಮಡಗಾಂವ್‌ ನಡುವೆ ಸಂಪರ್ಕ ಕಲ್ಪಿಸಲಿದೆ. ಕರಾವಳಿ ಕರ್ನಾಟಕ, ಗೋವಾ ಮತ್ತು ಬೆಂಗಳೂರು ನಡುವೆ ವಾಣಿಜ್ಯ, ಶಿಕ್ಷಣ, ಪ್ರವಾಸೋದ್ಯಮ ಹಾಗೂ ಧಾರ್ಮಿಕ ಯಾತ್ರೆಗಳಿಗೆ ಬೆಂಬಲ ನೀಡಲು ಈ ರೈಲನ್ನು ವಿಸ್ತರಿಸುವಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಮನವಿ ಮಾಡಿದ್ದರು.

ಕುಮಾರಸ್ವಾಮಿ ಅವರ ಮನವಿಗೆ ತಕ್ಷಣವೇ ಸ್ಪಂದಿಸಿರುವ ರೈಲ್ವೆ ಸಚಿವರು ರೈಲು ವಿಸ್ತರಣೆಗೆ ಅನುಮೋದನೆ ನೀಡಿದ್ದಾರೆ. ಈ ಸೇವೆಯು ಪರಿಷ್ಕೃತ ವೇಳಾಪಟ್ಟಿಯೊಂದಿಗೆ ರೈಲು ಸಂಖ್ಯೆ 26655/26656 (ಯಶವಂತಪುರ – ಮಂಗಳೂರು – ಮಡಗಾಂವ್‌) ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಆಗಿ ಕಾರ್ಯಾಚರಣೆ ನಡೆಸಲಿದೆ. ಈ ನಿರ್ಧಾರದಿಂದ ಕರಾವಳಿ ಭಾಗದ ಸಾರಿಗೆ ಸಂಪರ್ಕಕ್ಕೆ ಹೊಸ ವೇಗ ಸಿಕ್ಕಂತಾಗಿದೆ.

Scroll to Top