ಪುತ್ತೂರು: ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟ; ಓರ್ವನ ಬಂಧನ, 11 ದನಗಳ ರಕ್ಷಣೆ!

(ನ್ಯೂಸ್‌ ಕಡಬ) newskadaba.com, ಅ.06 . ಪುತ್ತೂರಿನಿಂದ ಕೇರಳಕ್ಕೆ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿ ಪುತ್ತೂರಿನ ಆರ್ಯಾಪು ನಿವಾಸಿ ಶಿವಪ್ರಸಾದ್ ಅಕ್ಟೋಬರ್ 5 ರ ಮುಂಜಾನೆ ಪುತ್ತೂರಿನ ಬಲ್ನಾಡ್ ಗ್ರಾಮದ ಬಿಳಿಯೂರ್ಕಟ್ಟೆಯಲ್ಲಿ ಸಬ್-ಇನ್ಸ್‌ಪೆಕ್ಟರ್ ಸುಷ್ಮಾ ಜಿ ಭಂಡಾರಿ ನೇತೃತ್ವದ ತಂಡ ದಾಳಿ ನಡೆಸಿ KA-19-AF-8558 ನೋಂದಣಿಯ ಪಿಕಪ್ ವಾಹನವನ್ನು ವಶಪಡಿಸಿಕೊಂಡಿದೆ.

ಕ್ರೂರ ರೀತಿಯಲ್ಲಿ ತುಂಬಿಸಲಾಗಿದ್ದ 11 ದನಗಳನ್ನು ರಕ್ಷಿಸಲಾಗಿದ್ದು, ಪೊಲೀಸರು ವಾಹನ ತಡೆಯುತ್ತಿದ್ದಂತೆ ಚಾಲಕ ಹಾಗೂ ಇನ್ನೊಬ್ಬ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾರೆ.ವಧೆಯ ಉದ್ದೇಶದಿಂದ ಸಾಗಿಸಲಾಗುತ್ತಿದ್ದ ಈ ಕೃತ್ಯದ ವಿರುದ್ಧ ಕರ್ನಾಟಕ ಗೋಹತ್ಯೆ ತಡೆ ಮತ್ತು ದನ ಸಂರಕ್ಷಣಾ ಕಾಯ್ದೆ 2020 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top