ಕೊಟ್ಟಾರಚೌಕಿ ಬಳಿ ಪಿಕಪ್‌ನಿಂದ ರಸ್ತೆಗೆ ಬಿದ್ದ ಕಬ್ಬಿಣದ ಸಲಾಕೆಗಳು: NH 66ರಲ್ಲಿ ಕೆಲಕಾಲ ಟ್ರಾಫಿಕ್ ಜಾಮ್!

(ನ್ಯೂಸ್‌ ಕಡಬ) newskadaba.com, ಅ.09 . ಪಿಕಪ್ ವಾಹನದಿಂದ ಕಬ್ಬಿಣದ ಸಲಾಕೆಗಳು ರಸ್ತೆಗೆ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೊಟ್ಟಾರಚೌಕಿಯ ಮಾಲೆಮಾರ್ ಕ್ರಾಸ್ ಬಳಿ ಗುರುವಾರ ರಾತ್ರಿ ಸಂಭವಿಸಿದೆ.

ಕಬ್ಬಿಣದ ಸಲಾಕೆಗಳನ್ನು ತುಂಬಿಕೊಂಡು ಸಾಗುತ್ತಿದ್ದ ಪಿಕಪ್ ವಾಹನಕ್ಕೆ ಬೈಕ್ ಏಕಾಏಕಿ ಅಡ್ಡ ಬಂದಿದೆ. ಹೀಗಾಗಿ ಪಿಕಪ್ ಚಾಲಕ ಬ್ರೇಕ್ ಹಾಕಿದ್ದು, ಪರಿಣಾಮ ವಾಹನದಲ್ಲಿದ್ದ ಸಲಾಕೆಗಳು ರಸ್ತೆಗೆ ಬಿದ್ದಿವೆ.

ಪಿಕಪ್ ವಾಹನದಲ್ಲಿ ಸಾಮರ್ಥ್ಯಕ್ಕಿಂತ ಅಧಿಕ ಸಲಾಕೆಗಳನ್ನು ತುಂಬಿಕೊಂಡು ಸಾಗಿಸಲಾಗುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು.

Scroll to Top