(ನ್ಯೂಸ್ ಕಡಬ) newskadaba.com, ಅ.12 .ಮಂಗಳೂರಿನ ಸೋಮೇಶ್ವರ ಕಡಲತೀರದಲ್ಲಿ ಅಲೆಗಳ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ಅವರ ಮೃತದೇಹ ಪತ್ತೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಮ್ಮರಡಿ ಮೂಲದ ಉಜಿರೆಯ ಎಸ್ಡಿಎಂ ಕಾಲೇಜಿನ ಪ್ರಥಮ ವರ್ಷದ ಬಿ.ಕಾಮ್ ವಿದ್ಯಾರ್ಥಿಯಾಗಿದ್ದರು. ಸ್ನೇಹಿತರೊಂದಿಗೆ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಬಳಿಕ ಕಡಲತೀರಕ್ಕೆ ತೆರಳಿದ್ದರು. ನೀರಿನಲ್ಲಿ ಇಳಿದಾಗ ಪ್ರಕ್ಷುಬ್ಧ ಅಲೆಗಳ ಸೆಳೆತಕ್ಕೆ ಸಿಲುಕಿದ್ದಾರೆ. ಈಜುಗಾರಿಕೆ ಗೊತ್ತಿದ್ದ ಗೆಳೆಯ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.
ಎಸ್ಡಿಆರ್ಎಫ್, ಕರಾವಳಿ ಭದ್ರತಾ ಪಡೆ ಹಾಗೂ ಸ್ಥಳೀಯ ಮೀನುಗಾರರ ಕಾರ್ಯಾಚರಣೆಯಿಂದ ಅವರ ಮೃತದೇಹ ಮೇಲಕ್ಕೆತ್ತಲಾಗಿದೆ.ಮೃತ ಬಾಲಕ ಪೋಷಕರ ಏಕೈಕ ಪುತ್ರರಾಗಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




