
(ನ್ಯೂಸ್ ಕಡಬ) newskadaba.com, ಅ.13. ಅನೈತಿಕ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಚೂರಿಯಿಂದ ಇರಿದು ಪತ್ನಿಯನ್ನು ಕೊಲೆಗೈದ ಆರೋಪಿಯನ್ನು ಕಾವೂರು ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮಾರ್ಕಬನಹಳ್ಳಿ ನಿವಾಸಿ ಶಿವಲಿಂಗಪ್ಪ (40) ಬಂಧಿತ ಆರೋಪಿ. ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಮೊಗರು ಗ್ರಾಮದ ಉರುಂಡಾಡಿಗುಡ್ಡೆ ಎಂಬಲ್ಲಿ ಶಿವಲಿಂಗಪ್ಪ ಹಾಗೂ ಆತನ ಪತ್ನಿ ಸೋನಾಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಉಂಟಾದ ಜಗಳದಿಂದಾಗಿ ಆರೋಪಿ ಶಿವಲಿಂಗಪ್ಪ, ಪತ್ನಿ ಸೋನಾಲಿಗೆ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ.
ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆ ನಡೆಸಿದ ಕಾವೂರು ಪೊಲೀಸರು ಆರೋಪಿ ಶಿವಲಿಂಗಪ್ಪನನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ. ಇನ್ನು ಮೃತ ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರು ಸದ್ಯ ಆರೋಪಿಯ ಸಹೋದರಿಯ ಮನೆಯಲ್ಲಿದ್ದಾರೆ




