
(ನ್ಯೂಸ್ ಕಡಬ) newskadaba.com, ಅ. 15 . ಭಾರತದ ನೆಲದಲ್ಲಿ 24 ವರ್ಷಗಳ ಬಳಿಕ (2002ರ ನಂತರ) ಒಂದೇ ಪ್ರವಾಸದಲ್ಲಿ ವೆಸ್ಟ್ ಇಂಡೀಸ್ ತಂಡವು 3 ಪಂದ್ಯಗಳನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡಿದೆ.
ಹೈದರಾಬಾದ್ನಲ್ಲಿ ನಡೆದ 4ನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ 24 ರನ್ಗಳಿಂದ ಭಾರತದ ವಿರುದ್ಧ ಭರ್ಜರಿ ಜಯ ಸಾಧಿಸಿದೆ.ಮೊದಲು ಬ್ಯಾಟ್ ಮಾಡಿದ ವಿಂಡೀಸ್ 20 ಓವರ್ಗಳಲ್ಲಿ 3 ವಿಕೆಟ್ಗೆ 247 ರನ್ಗಳ ಬೃಹತ್ ಮೊತ್ತ ಕಲೆಹಾಕಿತು.ಗುರಿ ಬೆನ್ನತ್ತಿದ ಟೀಮ್ ಇಂಡಿಯಾ 19.3 ಓವರ್ಗಳಲ್ಲಿ 223 ರನ್ಗಳಿಗೆ ಆಲೌಟ್ ಆಯಿತು.
ಸರಣಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡುತ್ತಿರುವ ನಾಯಕ ಶಾಯ್ ಹೋಪ್ (ಈ ಪಂದ್ಯದಲ್ಲೂ ಅಜೇಯ 102* ರನ್) ಹಾಗೂ ಬೌಲಿಂಗ್ನಲ್ಲಿ ಮಿಂಚಿದ ಕೀಮೋ ಪಾಲ್ (5/41) ವಿಂಡೀಸ್ ಗೆಲುವಿಗೆ ಪ್ರಮುಖ ಕಾರಣರಾದರು.ಈ ಜಯದೊಂದಿಗೆ 5 ಪಂದ್ಯಗಳ ಟಿ20 ಸರಣಿಯು ಸದ್ಯ 2-2 ಅಂತರದಿಂದ ಸಮಬಲಗೊಂಡಿದೆ.ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ 5ನೇ ಹಾಗೂ ಅಂತಿಮ ಟಿ20 ಪಂದ್ಯವು ಸರಣಿ ವಿಜೇತರನ್ನು ನಿರ್ಧರಿಸಲಿದೆ.




