
(ನ್ಯೂಸ್ ಕಡಬ) newskadaba.com, ಅ. 15 . ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಅವರು ನಾಳೆ (ಅ.16) ಬೆಳಿಗ್ಗೆ 10:00 ಗಂಟೆಗೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕ ಸೇರಿದಂತೆ ಒಟ್ಟು ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಇವರು ಕರ್ನಾಟಕದ ಎರಡನೇ ಮಹಿಳಾ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. (ಈ ಹಿಂದೆ ವಿ.ಎಸ್. ರಮಾದೇವಿ ಅವರು ಮೊದಲ ಮಹಿಳಾ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು).




