
(ನ್ಯೂಸ್ ಕಡಬ) newskadaba.com, ಅ. 15 . ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕಳ್ಳತನ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 18 ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕೇರಳದ ಮಲಪ್ಪುರಂ ನಿವಾಸಿ ರಾಮ್ಶೀದ್.
ವಿಟ್ಲ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 457 ಮತ್ತು 380 ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ವಿಟ್ಲ ಪೊಲೀಸ್ ಠಾಣೆಯ ಎಎಸ್ಐ ಜಯರಾಮ್ ಹಾಗೂ ಸಿಪಿಸಿ ಶಿವಾನಂದ ಅವರು ಅಕ್ಟೋಬರ್ 13, 2026 ರಂದು ಕೇರಳದ ನಿಲಂಬೂರ್ ವಂಡೂರಿನಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.




