
(ನ್ಯೂಸ್ ಕಡಬ) newskadaba.com, ಅ. 15 . ಪಾಕಿಸ್ತಾನದ ವಾಯುವ್ಯ ನಗರ ಪೇಶಾವರದಲ್ಲಿ ಶಾಲೆಯೊಂದರ ಮೇಲ್ಛಾವಣಿ ಕುಸಿದು ಭೀಕರ ದುರ್ಘಟನೆ ಸಂಭವಿಸಿದೆ.
21 ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 40ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ.ಮೃತಪಟ್ಟ ಎಲ್ಲ ವಿದ್ಯಾರ್ಥಿಗಳು 13 ವರ್ಷದೊಳಗಿನವರು ಎಂದು ದೃಢಪಟ್ಟಿದೆ.ಗುರುವಾರ ಬೆಳಗ್ಗೆ ಪಾಠಗಳು ನಡೆಯುತ್ತಿದ್ದ ವೇಳೆ ಈ ಅನಾಹುತ ಸಂಭವಿಸಿದೆ.
ಕಟ್ಟಡದ ಅವಶೇಷಗಳ ಅಡಿಯಲ್ಲಿ ಇನ್ನೂ ಕೆಲವು ಮಕ್ಕಳು ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿದೆ.ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಹಾಗೂ ಕೆಪಿ ರಾಜ್ಯಪಾಲರ ಸಲಹೆಗಾರ ಸಮರ್ ಹರೂನ್ ಬಿಲೋರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ಮತ್ತು ರಕ್ಷಣಾ ಕಾರ್ಯವನ್ನು ತುರ್ತಾಗಿ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.




