
(ನ್ಯೂಸ್ ಕಡಬ) newskadaba.com, ಅ. 16. ಕರ್ನಾಟಕದ ನೂತನ ರಾಜ್ಯಪಾಲರಾಗಿ ಬಿಜೆಪಿಯ ಹಿರಿಯ ನಾಯಕಿ ಡಾ. ಸುಧಾ ಯಾದವ್ ನೇಮಕಗೊಂಡಿದ್ದು, ಇಂದು ಬೆಳಗ್ಗೆ ಪ್ರಮಾಣವಚ ಸ್ವೀಕರಿಸಲಿದ್ದಾರೆ.
ಬರೋಬ್ಬರಿ ಐದು ವರ್ಷಗಳ ಕಾಲ ಕರ್ನಾಟಕದ ರಾಜ್ಯಪಾಲರಾಗಿದ್ದ ಥಾವರ್ ಚಂದ್ ಗೆಹ್ಲೋಟ್ ಅವರ ಅಧಿಕಾರವಧಿ ಪೂರ್ಣಗೊಂಡ ಹಿನ್ನೆಲೆ ಅವರ ಸ್ಥಾನಕ್ಕೆ ಸುಧಾ ಯಾದವ್ ನಿಯೋಜನೆಗೊಂಡಿದ್ದಾರೆ. ಕಾರ್ಗಿಲ್ ಹುತಾತ್ಮ ಯೋಧನ ಪತ್ನಿಯಾಗಿರುವ ಸುಧಾ ಯಾದವ್ ರಸಾಯನಶಾಸ್ತ್ರದಲ್ಲಿ ಪಿಎಚ್ಡಿ ಪಡೆದಿದುಕೊಂಡಿದ್ದು, ಮಾಜಿ ಲೋಕಸಭಾ ಸಂಸದೆಯಾಗಿದ್ದು, ಪ್ರಸ್ತುತ ಬಿಜೆಪಿ ಸಂಸದೀಯ ಮಂಡಳಿಯ ಪ್ರಮುಖ ಸದಸ್ಯೆಯಾಗಿದ್ದಾರೆ.
ಬೆಂಗಳೂರಿನ ಲೋಕಭವನದ ಗಾಜಿನಮನೆಯಲ್ಲಿ ಬೆಳಗ್ಗೆ 10 ಗಂಟೆಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳು, ಸುಧಾ ಯಾದವ್ ಅವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರು ಸೇರಿದಂತೆ ಬಿಜೆಪಿಯ ಹಲವು ನಾಯಕರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ.




