ಬಸ್ ಚಾಲಕರೂ ಕಡ್ಡಾಯವಾಗಿ ಸೀಟ್ ಬೆಲ್ಟ್ ಹಾಕಬೇಕು – ಇಲ್ಲದಿದ್ದರೆ ಬೀಳುತ್ತೆ ದಂಡ!

(ನ್ಯೂಸ್‌ ಕಡಬ) newskadaba.com, ಅ. 17 . ರಸ್ತೆ ಸುರಕ್ಷತಾ ನಿಯಮಗಳ ಅನ್ವಯ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಸೇರಿದಂತೆ ಎಲ್ಲಾ ವಾಣಿಜ್ಯ ವಾಹನ ಹಾಗೂ ಬಸ್ ಚಾಲಕರಿಗೆ ಸೀಟ್ ಬೆಲ್ಟ್ ಕಡ್ಡಾಯಗೊಳಿಸಲಾಗಿದೆ. ನಗರದ ಪ್ರಮುಖ ಸಿಗ್ನಲ್‌ಗಳಲ್ಲಿ ಅಳವಡಿಸಿರುವ ಎಐ ಕ್ಯಾಮೆರಾಗಳು ಮತ್ತು ಸಂಚಾರ ಪೊಲೀಸರು ಸೀಟ್ ಬೆಲ್ಟ್ ಧರಿಸದ ಚಾಲಕರನ್ನು ಪತ್ತೆ ಮಾಡಿ ದಂಡ ವಿಧಿಸುತ್ತಿದ್ದಾರೆ.

ನಿಯಮ ಉಲ್ಲಂಘಿಸಿದ ಪರಿಣಾಮ ವಿಧಾನಸೌಧ ಮೆಟ್ರೋ ನಿಲ್ದಾಣದ ಬಳಿ ಬಸ್ ಚಾಲಕನೊಬ್ಬನಿಗೆ 500 ರೂ. ದಂಡ ವಿಧಿಸಲಾಗಿದೆ. ಆದಾಗ್ಯೂ, ಅನೇಕ ಬಸ್ ಚಾಲಕರು ಸೀಟ್ ಬೆಲ್ಟ್ ಧರಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದ್ದು, ಕೆಲವು ಬಸ್‌ಗಳಲ್ಲಿ ಸೀಟ್ ಬೆಲ್ಟ್‌ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಅಂಶವೂ ‘ಪಬ್ಲಿಕ್ ಟಿವಿ’ ರಿಯಾಲಿಟಿ ಚೆಕ್‌ನಲ್ಲಿ ಬೆಳಕಿಗೆ ಬಂದಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಬಸ್‌ಗಳಲ್ಲಿ ಸೀಟ್ ಬೆಲ್ಟ್ ದುರಸ್ತಿಗೆ ಮುಂದಾಗುವುದರ ಜೊತೆಗೆ ಚಾಲಕರಲ್ಲಿ ಜಾಗೃತಿ ಮೂಡಿಸಬೇಕಿದೆ.

Scroll to Top