
(ನ್ಯೂಸ್ ಕಡಬ) newskadaba.com, ಅ . 23 . ಕುವೆಟ್ಟು ಗ್ರಾಮದ ಕಿನ್ನಿಗೋಳಿ ಬಸ್ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಢಿಕ್ಕಿ ಹೊಡೆದು ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಮಹಿಳೆ ಸಾಲಿಯಾ ಅವರು ಕಿನ್ನಿಗೋಳಿ ಬಸ್ ನಿಲ್ದಾಣದಿಂದ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿ ರಸ್ತೆ ದಾಟುತ್ತಿದ್ದರು.
ಈ ವೇಳೆ ಮದ್ದಡ್ಕ ಕಡೆಯಿಂದ ಗುರುವಾಯನಕೆರೆ ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಸಾಲಿಯಾ ಅವರಿಗೆ ಗಾಯವಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




