ಬಂಟ್ವಾಳ: ಕೌಟುಂಬಿಕ ಕಲಹ; ಪತ್ಪಿಯನ್ನು ಹಲ್ಲೆ ನಡೆಸಿ ಕೊಲೆಗೈದ ಶಂಕೆ, ಪತಿ ವಶಕ್ಕೆ

(ನ್ಯೂಸ್‌ ಕಡಬ) newskadaba.com, ಅ. 24 . ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯು ಪತ್ನಿಗೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಳಗಾವಿ ಜಿಲ್ಲೆಯ ಅಥಣಿ ಮೂಲದ, ಬಂಟ್ವಾಳದ ವಗ್ಗದಲ್ಲಿ ವಾಸವಿದ್ದ ಸುನೀತಾ ಮಹಾದೇವ್ ದೇಸಂಗಿ (34) ಮೃತ ದುರ್ದೈವಿ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಿವಾಸಿ ಹಾಗೂ ಮೃತರ ಪತಿ ಸಂಜೀವಕುಮಾರ್ (36).

ದಂಪತಿ ನಡುವಿನ ವೈವಾಹಿಕ ಕಲಹಕ್ಕೆ ಸಂಬಂಧಿಸಿದಂತೆ ಹಿಂದೆ ಹಿರಿಯರು ರಾಜಿ ಸಂಧಾನ ನಡೆಸಿದ್ದರು. ಹೆರಿಗೆಯ ಬಳಿಕ ತವರು ಮನೆಯಲ್ಲಿದ್ದ ಸುನೀತಾ ಅವರನ್ನು ಅಕ್ಟೋಬರ್ 4ರಂದು ಆರೋಪಿ ವಗ್ಗದ ಮನೆಗೆ ಕರೆತಂದಿದ್ದನು.ಅಕ್ಟೋಬರ್ 22ರಂದು ರಾತ್ರಿ ಪತಿ ತನ್ನ ಮೇಲೆ ಹಲ್ಲೆ ನಡೆಸಿ ಕಿರುಕುಳ ನೀಡುತ್ತಿರುವುದಾಗಿ ಸುನೀತಾ ತಮ್ಮ ಸಹೋದರ ಅರುಣ್ ಅವರಿಗೆ ಫೋನ್ ಮೂಲಕ ತಿಳಿಸಿದ್ದರು.

ಅಕ್ಟೋಬರ್ 23ರ ಮುಂಜಾನೆ ಸುನೀತಾ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸುವುದಾಗಿ ಆರೋಪಿ ಸೋದರನಿಗೆ ತಿಳಿಸಿದ್ದಾನೆ. ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಸುನೀತಾ ಮೃತಪಟ್ಟಿರುವುದು ಕಂಡುಬಂದಿದ್ದು, ದೇಹದ ಮೇಲೆ ಹಲ್ಲೆಯ ಗಾಯಗಳು ಹಾಗೂ ರಕ್ತದ ಗುರುತುಗಳಿದ್ದವು.ಮೃತರ ಸಹೋದರ ಅರುಣ್ ಮಹಾದೇವ್ ದೇಸಂಗಿ ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 142/2026ರಡಿ BNS 2023ರ ಕಲಂ 103 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

Scroll to Top