ಹೊಸ್ಮಠ ಸೇತುವೆ ಮುಳುಗಡೆ ► ಉಪ್ಪಿನಂಗಡಿ – ಸುಬ್ರಹ್ಮಣ್ಯ ಸಂಚಾರ ಅಸ್ತವ್ಯಸ್ತ



(ನ್ಯೂಸ್ ಕಡಬ) newskadaba.com ಕಡಬ, ಜೂ.11. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮುಳುಗು ಸೇತುವೆಯೆಂದೇ ಖ್ಯಾತಿ ಪಡೆದಿರುವ ಹೊಸ್ಮಠ ಸೇತುವೆಯು ಮುಳುಗಡೆಗೊಂಡು ಸಂಚಾರಕ್ಕೆ ತಡೆಯುಂಟಾಗಿದೆ.







ಹಲವು ದಶಕಗಳಿಂದ ಮಳೆಗೆ ಮುಳುಗಡೆಗೊಂಡು ಸಂಚಾರಕ್ಕೆ ಅಡಚಣೆಯುಂಟಾಗುವ ಹಿನ್ನೆಲೆಯಲ್ಲಿ ನೂತನ ಸೇತುವೆಯು ನಿರ್ಮಾಣ ಹಂತದಲ್ಲಿದ್ದು, ಇನ್ನೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಸೇತುವೆ ಮುಳುಗಡೆಯಿಂದಾಗಿ ಉಪ್ಪಿನಂಗಡಿ – ಸುಬ್ರಹ್ಮಣ್ಯ ಕಡೆಗೆ ಪ್ರಯಾಣಿಸುವ ಶಾಲಾ – ಕಾಲೇಜುಗಳ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿ ಹಲವರು ತೊಂದರೆ ಅನುಭವಿಸುವಂತಾಯಿತು.






error: Content is protected !!
Scroll to Top