ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್‌ ಅಲರ್ಟ್: ಇನ್ಮುಂದೆ ಈ ಹೊಸ ರೂಲ್ಸ್ ಕಡ್ಡಾಯ!

(ನ್ಯೂಸ್‌ ಕಡಬ) newskadaba.com, ಅ. 27 . ಗೃಹಲಕ್ಷ್ಮಿ ಯೋಜನೆಯನ್ನು ಪರಿಷ್ಕರಿಸಲು ಸರ್ಕಾರ ವಿಶೇಷ ಮೊಬೈಲ್ ಆಪ್ ಸಿದ್ಧಪಡಿಸಿದ್ದು, ಇದರ ಮೂಲಕ ಮನೆಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಾಗುತ್ತದೆ.

ಗ್ಯಾರಂಟಿ ಸಮಿತಿ ಸದಸ್ಯರು, ಆಶಾ ಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳೇ ನೇರವಾಗಿ ಜನರ ಬಳಿಗೆ ತೆರಳಿ ಯಜಮಾನಿಯ ಎಪಿಕ್ ಕಾರ್ಡ್ ನಂಬರ್, ವಿಳಾಸ, ಮೊಬೈಲ್ ಸಂಖ್ಯೆ, ಆದಾಯ ಸೇರಿದಂತೆ ಪ್ರಮುಖ ವಿವರಗಳನ್ನು ಪಡೆದುಕೊಳ್ಳಲಿದ್ದಾರೆ.

ಅನರ್ಹರನ್ನು ಯೋಜನೆಯಿಂದ ಕೈಬಿಟ್ಟು, ಕೇವಲ ನಿಜವಾದ ಅರ್ಹರಿಗೆ ಮಾತ್ರ ಸ್ಮಾರ್ಟ್ ಕಾರ್ಡ್ ಮೂಲಕ ಹಣ ತಲುಪಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ.ವಿರೋಧ ಪಕ್ಷಗಳ ಅಪಪ್ರಚಾರದ ನಡುವೆಯೂ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ. ರೇವಣ್ಣ ಸ್ಪಷ್ಟಪಡಿಸಿದ್ದಾರೆ.

ಮೃತಪಟ್ಟ ಫಲಾನುಭವಿಗಳ ಬ್ಯಾಂಕ್ ಖಾತೆಗಳಲ್ಲಿ ಉಳಿದುಕೊಂಡಿದ್ದ ಕೋಟ್ಯಂತರ ರೂ. ಹಣವನ್ನು ವಾಪಸ್ ಪಡೆದುಕೊಳ್ಳುವ ಕೆಲಸವೂ ಮುಂದುವರಿದಿದೆ.

Scroll to Top