ಉಡುಪಿಯಲ್ಲಿ ಆತಂಕ ಸೃಷ್ಟಿಸಿದ ನಾಪತ್ತೆ ಪ್ರಕರಣಗಳು

ಪೋಷಕರ ನಿದ್ದೆಗೆಡಿಸಿದ ಆತಂಕ!

(ನ್ಯೂಸ್‌ ಕಡಬ) newskadaba.com, ಅ. 27 . ಉಡುಪಿ ಜಿಲ್ಲೆಯಲ್ಲಿ ಪ್ರೇಮ ಪ್ರಕರಣಗಳು, ಕೌಟುಂಬಿಕ ಸಮಸ್ಯೆಗಳು ಹಾಗೂ ವಿವಿಧ ಕಾರಣಗಳಿಂದ ಯುವಕ-ಯುವತಿಯರು ಮನೆ ತೊರೆಯುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದು, ಪೋಷಕರಲ್ಲಿ ಆತಂಕ ಮೂಡಿಸಿದೆ. ಪ್ರಮುಖವಾಗಿ 18 ವರ್ಷ ಮೇಲ್ಪಟ್ಟ ಯುವಕರು ಮತ್ತು ಮಹಿಳೆಯರ ನಾಪತ್ತೆ ಪ್ರಕರಣಗಳು ಹೆಚ್ಚಾಗಿ ವರದಿಯಾಗಿವೆ.

ಅಧಿಕೃತ ಅಂಕಿಅಂಶಗಳ ಪ್ರಕಾರ, ಕಳೆದ ಮೂರು ವರ್ಷಗಳಲ್ಲಿ ನಾಪತ್ತೆಯಾದ ಅಪ್ರಾಪ್ತ ಬಾಲಕ-ಬಾಲಕಿಯರನ್ನು ಪೊಲೀಸರು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ. ಆದರೆ, 18 ವರ್ಷ ಮೇಲ್ಪಟ್ಟ ಒಟ್ಟು 72 ಪುರುಷರು ಹಾಗೂ ಮಹಿಳೆಯರ ಪತ್ತೆ ಕಾರ್ಯ ಇನ್ನೂ ಬಾಕಿ ಉಳಿದಿದೆ. ಕಾಣೆಯಾದವರ ಪತ್ತೆಗೆ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದ್ದು, ಪತ್ತೆಯಾದವರಾರೂ ದೇಶವಿರೋಧಿ ಸಂಘಟನೆಗಳಲ್ಲಿ ತೊಡಗಿಸಿಕೊಂಡಿಲ್ಲ ಎಂದು ಎಸ್ಪಿ ಹರಿರಾಮ್ ಶಂಕರ್ ಸ್ಪಷ್ಟಪಡಿಸಿದ್ದಾರೆ.

Scroll to Top