ಮಂಗಳೂರು ನ್ಯಾಯಾಲಯದಿಂದ ಮಹತ್ವದ ತೀರ್ಪು: ಪೋಕ್ಸೊ ಪ್ರಕರಣದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ಮತ್ತು ದಂಡ

(ನ್ಯೂಸ್‌ ಕಡಬ) newskadaba.com, ಅ. 29 .ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿ ಬೆದರಿಕೆ ಹಾಕಿದ ಪ್ರಕರಣದಲ್ಲಿ 32 ವರ್ಷದ ರವಿ ಅಲಿಯಾಸ್ ರವೀಂದ್ರ ಆಚಾರ್ಯ ಎಂಬಾತನಿಗೆ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ನೆಲ್ಯಾಡಿ ನಿವಾಸಿಯಾದ ಆರೋಪಿಯ ವಿರುದ್ಧ 2018ರಲ್ಲಿ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹25,000 ದಂಡ ವಿಧಿಸಿದೆ. ಐಪಿಸಿ ಸೆಕ್ಷನ್ 506ರ ಅಡಿಯಲ್ಲಿಯೂ ಒಂದು ವರ್ಷ ಜೈಲು ಶಿಕ್ಷೆ ಮತ್ತು ₹25,000 ದಂಡ ವಿಧಿಸಲಾಗಿದೆ.ಎರಡೂ ಶಿಕ್ಷೆಗಳನ್ನು ಏಕಕಾಲದಲ್ಲಿ ಅನುಭವಿಸುವಂತೆ ನ್ಯಾಯಾಲಯ ಆದೇಶಿಸಿದೆ. ಪ್ರಾಸಿಕ್ಯೂಷನ್ ಪರವಾಗಿ ಸರ್ಕಾರಿ ಅಭಿಯೋಜಕ ಪುಷ್ಪರಾಜ್ ಅದಂತಾಯ ವಾದ ಮಂಡಿಸಿದ್ದರು.

Scroll to Top