
(ನ್ಯೂಸ್ ಕಡಬ) newskadaba.com, ಅ .31. ಡಿಜಿಟಲ್ ಅರೆಸ್ಟ್ ಸೇರಿದಂತೆ ಆನ್ಲೈನ್ ವಂಚನೆ ಪ್ರಕರಣಗಳಲ್ಲಿ ಬ್ಯಾಂಕ್ಗಳ ನಿರ್ಲಕ್ಷ್ಯ ಸಾಬೀತಾದರೆ, ಸಂತ್ರಸ್ತರು ಕಳೆದುಕೊಂಡ ಹಣವನ್ನು ಬ್ಯಾಂಕ್ಗಳೇ ಪರಿಹಾರವಾಗಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು, ಗ್ರಾಹಕರನ್ನು ಡಿಜಿಟಲ್ ವಂಚನೆಯಿಂದ ರಕ್ಷಿಸುವುದು ಬ್ಯಾಂಕ್ಗಳ ಮೂಲಭೂತ ಕರ್ತವ್ಯ ಎಂದು ಹೇಳಿದೆ. ಅನುಮಾನಾಸ್ಪದ ಹಣಕಾಸು ವಹಿವಾಟುಗಳನ್ನು ಗುರುತಿಸಿ ತಡೆಯುವ ಜೊತೆಗೆ, ಅಗತ್ಯವಿದ್ದಲ್ಲಿ ಪೊಲೀಸರಿಗೂ ಮಾಹಿತಿ ನೀಡಬೇಕು ಎಂದು ಸೂಚಿಸಿದೆ.
ದೇಶದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣಗಳು ಶೇ.50ರಷ್ಟು ಕಡಿಮೆಯಾಗಿದ್ದರೂ, ಈ ವರ್ಷವೂ ಸುಮಾರು ₹800 ಕೋಟಿ ನಷ್ಟ ಸಂಭವಿಸಿದೆ ಎಂದು ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ.ಎಲ್ಲಾ ಹಣಕಾಸು ಸಂಸ್ಥೆಗಳಿಗೆ ಅನ್ವಯವಾಗುವ ಸಮಗ್ರ ಮಾರ್ಗಸೂಚಿಗಳನ್ನು ರೂಪಿಸುವ ನಿಟ್ಟಿನಲ್ಲಿ RBIಗೆ ಅಧಿಕೃತ ಹಣಕಾಸು ಸಂಸ್ಥೆಗಳ ಪಟ್ಟಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.




