
(ನ್ಯೂಸ್ ಕಡಬ) newskadaba.com, ಅ .31. ಖಾಸಗಿ ಹೋಟೆಲ್ನ ಈಜುಕೊಳದಲ್ಲಿ ಇಬ್ಬರು ವಿದೇಶಿಗರು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಎಲೆಕ್ಟ್ರಿಕ್ ಶಾಕ್ನಿಂದ ದುರ್ಘಟನೆ ನಡೆದಿದ್ದು, ಸ್ಲೋವಾಕಿಯಾ ಮೂಲದ ಓರಿಯಾಟ್ (45) ಮತ್ತು ಡಚ್ ಮೂಲದ ಅಲೆಕ್ಸಾಂಡರ್ ಮ್ಯಾಕ್ಸಿಲನ್ (59) ಮೃತ ದುರ್ದೈವಿಗಳಾಗಿದ್ದಾರೆ. ಈ ಸಂಬಂಧ ಮೃತ ಅಲೆಕ್ಸಾಂಡರ್ ಪತ್ನಿ ದೂರು ನೀಡಿದ್ದು, ಸ್ಥಳಕ್ಕೆ ಹಲಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಣಿಪಾಲ್ ಆಸ್ಪತ್ರೆಗೆ ಮೃತದೇಹಗಳನ್ನು ರವಾನಿಸಲಾಗಿದೆ.
ಕಾನ್ರಾಡ್ ಹೋಟೆಲ್ನ 3ನೇ ಮಹಡಿಯಲ್ಲಿರುವ ಸ್ವಿಮ್ಮಿಂಗ್ ಪೂಲ್ನಲ್ಲಿ ಘಟನೆ ನಡೆದಿದೆ. ಸ್ಲೋವೋಕಿಯಾ ಮತ್ತು ಜರ್ಮನ್ ಮೂಲದ ಇಬ್ಬರು ಕಳೆದ ಕೆಲ ದಿನಗಳಿಂದ ಹೋಟೆಲ್ನಲ್ಲಿ ತಂಗಿದ್ದರು. ಘಟನೆ ವೇಳೆ ಇಬ್ಬರನ್ನು ರಕ್ಷಿಸಲು ಅಮೆರಿಕ ಮೂಲದ ವ್ಯಕ್ತಿ ಮತ್ತು ಪೂಲ್ ಅಟೆಂಡರ್ ಯತ್ನಿಸಿದ್ದು, ಅವರಿಬ್ಬರು ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಪ್ರಕರಣ ಸಂಬಂಧ ತನಿಖೆ ಮುಂದುವರಿದಿದ್ದು, ಹೋಟೆಲ್ ವಿರುದ್ಧ ನಿರ್ಲಕ್ಷ್ಯದ ಆರೋಪ ಕೇಳಿಬಂದಿದೆ.
ವರುಣ ನಾಲೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಳಗೋಳದ ಪಂಪ್ಲೈನ್ ರಸ್ತೆಯಲ್ಲಿ ನಡೆದಿದೆ. ಓರ್ವ ವಿದ್ಯಾರ್ಥಿ ಮೃತದೇಹ ಪತ್ತೆಯಾಗಿದ್ದು, ಮತ್ತೋರ್ವ ನಾಪತ್ತೆಯಾಗಿದ್ದಾನೆ. ಮೈಸೂರಿನ ಖಾಸಗಿ ಕಾಲೇಜಿನಲ್ಲಿ 3ನೇ ವರ್ಷದ ಬಿ.ಇ ಓದುತ್ತಿದ್ದ ಅರ್ಜುನ್ ಮೃತ ವಿದ್ಯಾರ್ಥಿಯಾಗಿದ್ದು, ಆತನ ಸ್ನೇಹಿತ ಪಾರ್ಥಸಾರಥಿ ಪತ್ತೆಗೆ ಅಗ್ನಿಶಾಮಕ ದಳ ಸಿಬ್ಬಂದಿ ಶೋಧಕಾರ್ಯ ನಡೆಸುತ್ತಿದ್ದಾರೆ. ನಿನ್ನೆ ಸ್ನೇಹಿತರೊಂದಿಗೆ ವರಣು ನಾಲೆಗೆ ಈಜಲು ಇವರು ಬಂದಿದ್ದರು. ರಭಸವಾಗಿ ನೀರು ಹರಿದಿದ್ದರಿಂದ ಕೊಚ್ಚಿಹೋಗಿದ್ದರು ಎನ್ನಲಾಗಿದೆ.




