ದೀಪಾವಳಿ ಹಬ್ಬದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಏರಿಕೆ

(ನ್ಯೂಸ್‌ ಕಡಬ) newskadaba.com, ನ. 02. ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 10 ರೂ. ಹೆಚ್ಚಳವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನ 10 ರೂ.ನಷ್ಟು ಹೆಚ್ಚಿಸಲಾಗಿದ್ದು, ಸಿಲಿಂಡರ್ ಬೆಲೆ 2,820 ರೂ.ಗೆ ಏರಿಕೆಯಾಗಿದೆ. ಇನ್ನು ಈ ಪರಿಷ್ಕೃತ ದರ ನವೆಂಬರ್ 1 ರಿಂದ ಅನ್ವಯವಾಗಲಿದೆ.

ಕಳೆದ ಸೆಪ್ಟೆಂಬರ್, ಅಕ್ಟೋಬರ್ ಬಳಿಕ ಸತತ 3ನೇ ತಿಂಗಳು ಸಿಲಿಂಡರ್ ಬೆಲೆ ಏರಿಕೆಯಾಗಿದೆ. ಈ ಮೂಲಕ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಇತರ ವಾಣಿಜ್ಯ ಸಂಸ್ಥೆಗಳಿಗೆ ಮತ್ತಷ್ಟು ಆರ್ಥಿಕ ಹೊರೆ ಹೆಚ್ಚಾಗಿದೆ.

ಇದರಿಂದಾಗಿ ಆಹಾರ ಪದಾರ್ಥಗಳ ಬೆಲೆ ಹೆಚ್ಚಾಗುವ ಸಾಧ್ಯತೆಯಿದೆ.ಕಳೆದ ಸೆಪ್ಟೆಂಬರ್‌ನಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 9.50 ರೂ. ಏರಿಕೆಯಾಗಿತ್ತು, ಅಕ್ಟೋಬರ್‌ನಲ್ಲಿ 62.50 ರೂ. ಹೆಚ್ಚಳವಾಗಿತ್ತು. ಇದೀಗ ಮತ್ತೆ 10 ರೂ. ಹೆಚ್ಚಿಸಲಾಗಿದ್ದು, ದೀಪಾವಳಿ ಹಬ್ಬದ ಹೊತ್ತಿನಲ್ಲೇ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ.

Scroll to Top