ಅರೇಬಿಯನ್ ಸಮುದ್ರದಲ್ಲಿ ನೌಕಾಪಡೆಯ ಸಾಹಸ: 20 ಮೀನುಗಾರರ ಸುರಕ್ಷಿತ ರಕ್ಷಣೆ!

(ನ್ಯೂಸ್‌ ಕಡಬ) newskadaba.com, ಅ .28 . ಅರೇಬಿಯನ್ ಸಮುದ್ರದಲ್ಲಿ ಕಡಲ್ಗಳ್ಳರ ವಶದಲ್ಲಿದ್ದ ಮೀನುಗಾರಿಕಾ ಹಡಗನ್ನು ಭಾರತೀಯ ನೌಕಾಪಡೆ ಯಶಸ್ವಿಯಾಗಿ ವಶಕ್ಕೆ ಪಡೆದು, ಅದರಲ್ಲಿದ್ದ ಎಲ್ಲಾ 20 ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಿಸಿದೆ.

ಮುಂಬೈನಿಂದ 3,000 ಕಿ.ಮೀ.ಗೂ ಹೆಚ್ಚು ದೂರದಲ್ಲಿ ನಡೆದ ಈ ಕಾರ್ಯಾಚರಣೆ ಸತತ 48 ಗಂಟೆಗಳ ಕಾಲ ಮುಂದುವರಿದಿದ್ದು, ನವೆಂಬರ್ 2ರಂದು ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.

‘ಅಜಿನಿ’ ಹೆಸರಿನ ಮೀನುಗಾರಿಕಾ ಹಡಗನ್ನು ಕಡಲ್ಗಳ್ಳರಿಂದ ಮುಕ್ತಗೊಳಿಸುವಲ್ಲಿ ಭಾರತೀಯ ನೌಕಾಪಡೆ ಹಾಗೂ ವಾಯುಪಡೆ ಮಹತ್ವದ ಪಾತ್ರ ವಹಿಸಿವೆ. ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಯೋಧರನ್ನು ಅಭಿನಂದಿಸಿರುವ ರಾಜನಾಥ್ ಸಿಂಗ್, ಭಾರತದ ಕಡಲ ಭದ್ರತೆ ಮತ್ತು ಕಾರ್ಯಾಚರಣಾ ಸಾಮರ್ಥ್ಯಕ್ಕೆ ಇದು ಮತ್ತೊಂದು ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.

ಹಿಂದೂ ಮಹಾಸಾಗರ ಪ್ರದೇಶದಲ್ಲಿ ಕಡಲ ಭದ್ರತೆ ಹಾಗೂ ಸಮುದ್ರ ಮಾರ್ಗಗಳ ಸುರಕ್ಷತೆಗೆ ಭಾರತ ಬದ್ಧವಾಗಿದೆ ಎಂದು ಅವರು ಪುನರುಚ್ಚರಿಸಿದ್ದಾರೆ.

Scroll to Top