ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: 10 ಮಂದಿ ಅರೆಸ್ಟ್

(ನ್ಯೂಸ್‌ ಕಡಬ) newskadaba.com, ನ 05. ಆಗಸ್ಟ್ 7ರಂದು ಮಧ್ಯಾಹ್ನ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿಯಲ್ಲಿ ‘ಪ್ರಿನ್ಸ್ ಎಂಟರ್‌ಪ್ರೈಸಸ್’ ಮಾಲೀಕ ಡೇವಿಡ್ ಡಿಸೋಜಾ ಅವರನ್ನು ಮೋಟಾರ್ ಸೈಕಲ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಡೇವಿಡ್ ಅವರ ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿ ಕೊಲೆ ಮಾಡಿದ್ದ ಉತ್ತರ ಪ್ರದೇಶದ ರಾಜು @ ಫಾಜಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೈಂದೂರು ಬಳಿ ತಪಾಸಣೆ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದಾಗ, ಪೊಲೀಸರ ಆತ್ಮರಕ್ಷಣೆಗಾಗಿ ನಡೆಸಿದ ಗುಂಡೇಟಿನಲ್ಲಿ ಈ ಆರೋಪಿ ಗಾಯಗೊಂಡು ವಶಕ್ಕೆ ಪಡೆದಿದ್ದಾರೆ.ಪ್ರಕರಣದಲ್ಲಿ ಸಂಘಟಿತ ಅಪರಾಧದ ಅಂಶಗಳು ಕಂಡುಬಂದ ಹಿನ್ನೆಲೆಯಲ್ಲಿ, ಭೂಗತ ಪಾತಕಿ ಹೇಮಂತ್ ಪೂಜಾರಿ ಸೇರಿದಂತೆ ಇತರರ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ ಅಡಿಯಲ್ಲಿ ತನಿಖೆ ನಡೆಸಲು ಅನುಮತಿ ದೊರೆತಿದೆ.

ಒಟ್ಟು 10 ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ದಾಖಲೆಗಳನ್ನು ಮೈಸೂರಿನ ವಿಶೇಷ ಕೋಕಾ ನ್ಯಾಯಾಲಯಕ್ಕೆ ಹಸ್ತಾಂತರಿಸಲಾಗಿದೆ. ಪ್ರಕರಣದ 11ನೇ ಆರೋಪಿ ಹೇಮಂತ್ ಪೂಜಾರಿ ತಲೆಮರೆಸಿಕೊಂಡಿದ್ದಾನೆ.

Scroll to Top