
(ನ್ಯೂಸ್ ಕಡಬ) newskadaba.com, ನ 05. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಸಮೀಪದ ವರುಣಾ ನಾಲೆ ಬಳಿ ಮೈಸೂರಿನ 17 ವರ್ಷದ ದ್ವಿತೀಯ ಪಿಯುಸಿ ವಿದ್ಯಾರ್ಥಿ ನಿಗೂಢವಾಗಿ ನಾಪತ್ತೆಯಾಗಿದ್ದಾನೆ.
ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ವಿದ್ಯಾರ್ಥಿ ಬೈಕ್‌ನಲ್ಲಿ ಮನೆಯಿಂದ ಹೊರಟಿದ್ದ. ಆದರೆ, ಮನೆಗೆ ಮರಳದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ ವರುಣಾ ನಾಲೆಯ ದಂಡೆಯಲ್ಲಿ ಆತನ ಬೈಕ್, ಬಟ್ಟೆ ಹಾಗೂ ಮೊಬೈಲ್ ಪತ್ತೆಯಾಗಿವೆ. ವಿದ್ಯಾರ್ಥಿ ನಾಲೆಯ ನೀರಿಗೆ ಇಳಿದು ಕೊಚ್ಚಿಹೋಗಿದ್ದಾನೆಯೇ ಎಂಬ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರಿಂದ ಶೋಧ ಕಾರ್ಯ ಮುಂದುವರಿದಿದೆ.
ಈ ಸಂಬಂಧ ಕೆ.ಆರ್.ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.




