
(ನ್ಯೂಸ್ ಕಡಬ) newskadaba.com, ನ 05. ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ರೇಷನ್ ಕಾರ್ಡ್ ಇ-ಕೆವೈಸಿ ಪೂರ್ಣಗೊಳಿಸಲು ನವೆಂಬರ್ 10, 2026 ಅಂತಿಮ ಗಡುವು ಎಂದು ಆಹಾರ ಸಚಿವ ರಿಜ್ವಾನ್ ಅರ್ಷದ್ ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಇನ್ನೂ 41.33 ಲಕ್ಷಕ್ಕೂ ಅಧಿಕ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಳ್ಳುವುದು ಬಾಕಿಯಿದೆ. ನಿಗದಿತ ಅವಧಿಯೊಳಗೆ ಪ್ರಕ್ರಿಯೆ ಪೂರ್ಣಗೊಳಿಸದ ಸದಸ್ಯರ ಹೆಸರು ರೇಷನ್ ಕಾರ್ಡ್ನಿಂದ ತೆಗೆದುಹಾಕುವ ಅಥವಾ ಪಡಿತರ ಸೌಲಭ್ಯ ಅಮಾನತುಗೊಳಿಸುವ ಸಾಧ್ಯತೆಯಿದೆ.
ಇದರಿಂದ ಉಚಿತ ಪಡಿತರ ಮಾತ್ರವಲ್ಲದೆ, ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಹಣದ ಮೇಲೂ ಪರಿಣಾಮ ಬೀರಬಹುದು.Anna Seve ಮತ್ತು Aadhaar Face RD ಆ್ಯಪ್ ಬಳಸಿ ಮುಖದ ಗುರುತಿನ ಮೂಲಕ ಇ-ಕೆವೈಸಿ ಪೂರ್ಣಗೊಳಿಸಬಹುದು.ಪಡಿತರ ಚೀಟಿ ಹಾಗೂ ಆಧಾರ್ ಕಾರ್ಡ್ನೊಂದಿಗೆ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಬೆರಳಚ್ಚು ಅಥವಾ ಕಣ್ಣಿನ ಸ್ಕ್ಯಾನ್ ಮೂಲಕ ಉಚಿತವಾಗಿ ಇ-ಕೆವೈಸಿ ಮಾಡಿಸಬಹುದು.




